ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತನ್ನ 2012ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ಬೆಂಗಳೂರಿನ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ದಿನಾಂಕ: 20-12-2021 ರಲ್ಲಿ ನೀಡಿರುವ ಸೂಚನೆಯಂತೆ ಸಂಘದ ಸರ್ವ ಸದಸ್ಯರ ವಾಸ್ತವ ಮತ್ತು ವರ್ಚುಯಲ್ ವಿಧಾನದ ಮೂಲಕ ವಿಶೇಷ ಮಹಾಸಭೆಯನ್ನು ಫೆ. 20 ರ ಬೆಳಿಗ್ಗೆ 11 ಗಂಟೆಗೆ ವರ್ಚುಯಲ್ ವೇದಿಕೆಯ ಮೂಲಕ ಜರುಗಲಿದ್ದು ಜಿಲ್ಲೆಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಬೇಕೆಂದು ಸಂಘದ ಸಿಂದಗಿ ತಾಲೂಕು ಅಧ್ಯಕ್ಷ ಅಶೋಕ ತೆಲ್ಲೂರ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಿವಮೊಗ್ಗ ನಗರದ ಸಾಗರ ರಸ್ತೆ ಆಟೋ ಕಾಂಪ್ಲೆಕ್ಸ್ ನಲ್ಲಿರುವ ದ್ವಾರಕ ಕನ್ವೆನ್ಸನ್ ಹಾಲ್ ನಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಪಡಕ್ಷರಿ ಇವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಮಹಾಸಭೆಯನ್ನು ಆಯೋಜಿಸಲಾಗಿದ್ದು, ಸಂಘದ ಸಮಸ್ತ ಸದಸ್ಯರು ಈ ವಿಶೇಷ ಮಹಾಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ, ಸೂಚನೆಗಳನ್ನು ನೀಡಿ, ಸಭೆಯನ್ನು ಯಶಸ್ವಿಗೊಳಿಸಿ ಕೊಡುವಂತೆ ಕೇಂದ್ರ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.