spot_img
spot_img

ತ್ಯಾಜ್ಯ ನಿರ್ವಹಣೆಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

Must Read

- Advertisement -

ಕನ್ನಡ ವಿಶ್ವವಿದ್ಯಾಲಯ ಹಂಪಿ ಯ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಮತ್ತು ಯುವಕರ ಪಾತ್ರ ಹಾಗೂ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತ ವಿಶೇಷ ಉಪನ್ಯಾಸ ಮಾಲಿಕೆಯ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅಧ್ಯಕ್ಷೀಯ ಭಾಷಣಮಾಡಿದರು.

ಇಂದಿನ ದಿನಮಾನಗಳಲ್ಲಿ ಸೂಕ್ತ ತ್ಯಾಜ್ಯನಿರ್ವಹಣೆ ಮಾಡದಿದ್ದರೆ ಮುಂದೆ ಮಾನವ ಅಲ್ಲದೇ ಇಡೀ ಪ್ರಾಣಿ ಸಂಕುಲ ಸಂಕಷ್ಟಕ್ಕೀಡಾಗಬೇಕಾಗುತ್ತದೆ. ತ್ಯಾಜ್ಯದಲ್ಲಿ ಹುದುಗಿರುವ ಸಂಪನ್ಮೂಲಗಳ ಮರುಬಳಕೆಯಿಂದ ಒಂದೆಡೆ ಪ್ರಕೃತಿಯೊಳಗಿನ ಅವಶ್ಯಕ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯಾಗುವುದಲ್ಲದೆ ಆರ್ಥಿಕ ಅಭಿವೃದ್ದಿಗೆ ಸಹಕಾರಿಯಾಗಲಿದ್ದು, ಸಮುದಾಯದ ಸಹಭಾಗಿತ್ವಕ್ಕಾಗಿ ವಿಶೇಷ ಯೋಜನೆಗಳನ್ನು ರೂಪಿಸುವ ಅವಶ್ಯಕತೆಯಿದೆಯೆಂದರು.

ವಿಶ್ವವಿದ್ಯಾಲಯದ ಆವರಣದಲ್ಲಿ ಉತ್ಪತ್ತಿಯಾಗುತ್ತಿರುವ ಹಸಿರೆಲೆ ತ್ಯಾಜ್ಯದಿಂದ ನೈಸರ್ಗಿಕವಾಗಿ ಕಾಂಪೋಷ್ಟ ಸಿದ್ಧಗೊಳ್ಳುತ್ತಿದ್ದು, ಆಹಾರ ಉಳಿಕೆಗಳ ಸೂಕ್ತ ವಿಲೇವಾರಿ ಮಾಡಲಾಗುತ್ತಿದೆಯೆಂದು ಈ ಸಂದರ್ಭದಲ್ಲಿ ತಿಳಿಸಿದರು.

- Advertisement -

ಶಕ್ತಿನಗರದ ಕ್ಯಾಷುಟೆಕ್ ನಿರ್ಮಿತಿ ಕೇಂದ್ರದ ವಿಜಯನಗರ ಜಿಲ್ಲಾ ಶಾಖೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶರಣಬಸಪ್ಪ ಪಟ್ಟೆದರವರು ತ್ಯಾಜ್ಯ ನಿರ್ವಹಣೆಯಲ್ಲಿ ಸ್ಥಳೀಯ ಸಂಸ್ಥೆ ಹಾಗು ಯುವಕರ ಪಾತ್ರ ಕುರಿತಾದ ಉಪನ್ಯಾಸದಲ್ಲಿ, ಇದೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು ನಾವೆಲ್ಲರೂ ಈಗಲೇ ಎಚ್ಚತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆಯೆಂದು ಸೂಚ್ಯವಾಗಿ ತಿಳಿಸಿದರು.

ತ್ಯಾಜ್ಯ ನಿರ್ವಹಣಾ ಕ್ಷೇತ್ರದಲ್ಲಿ ಕ್ಯಾಷುಟೆಕ್ ಸಂಸ್ಥೆಯು ನೂತನ ತಂತ್ರಜ್ಞಾನಗಳನ್ನು ಅಳವಡಿಸುವಲ್ಲಿ ಮುಂಚೂಣಿಯಲ್ಲಿದ್ದು ಕೇಂದ್ರ ಸರ್ಕಾರದ ಪ್ರಶಸ್ತಿ ಪಡೆದಿರುವುದನ್ನು ಸಭೆಗೆ ತಿಳಿಸಿದರು

ತ್ಯಾಜ್ಯ ನಿರ್ವಹಣೆಯಲ್ಲಿ ಜೈವಿಕ ತಂತ್ರಜ್ಞಾನಗಳನ್ನು ಅಳವಡಿಸಿ ದಿನಂಪ್ರತಿ ನೂರಾರು ಟನ್ನಗಳಷ್ಟು ರಾಯಚೂರಿನ ನಗರ ತ್ಯಾಜ್ಯದಿಂದ ಕಾಂಪೋಸ್ಟ್ ತಯಾರಿಕೆಗೆ ಕ್ಯಾಷುಟೆಕ್ ನಿಂದ ತಂತ್ರಜ್ಞಾನ ವರ್ಗಾವಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾಲಚಂದ್ರ ಜಾಬಶೆಟ್ಟಿಯವರ ಉಪನ್ಯಾಸವು ಸೂಕ್ತ ತ್ಯಾಜ್ಯ ನಿರ್ವಹಣೆಯಿಂದ ಮೂರು ಆಯಾಮಗಳಲ್ಲಿ ಅಂದರೆ ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಆಯಾಮಗಳಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯ ಯೆಂಬ ವಿಷಯದ ಮೇಲೆ ಕೇಂದ್ರಿಕೃತಗೊಂಡಿತ್ತು.

- Advertisement -

ತ್ಯಾಜ್ಯ ನಿರ್ವಹಣೆಯಲ್ಲಿ ಉಪಕಾರಿ ಸೂಕ್ಷ್ಮಾಣು ಆಧಾರಿತ ಜೈವಿಕ ತಂತ್ರಜ್ಞಾನ ಅಳವಡಿಕೆಯಿಂದ ಭೂ ಮಾಲಿನ್ಯ, ಜಲ ಮಾಲಿನ್ಯ ಹಾಗೂ ವಾಯು ಮಾಲಿನ್ಯ ತಡೆಯಬಹುದು ಹಾಗೂ ಕಾರ್ಮಿಕರ ಆರೋಗ್ಯ ಸಂರಕ್ಷಣೆಯನ್ನು ಸಹ ಸುಗಮಗೊಳಿಸಬಹುದಾಗಿದೆಯೆಂದು ಅಭಿಪ್ರಾಯ ಪಟ್ಟರು.

ಎನ್.ಎಸ್.ಎಸ್.ಘಟಕದ ಸಂಯೋಜಕ ಹಾಗೂ ಪ್ರಾಧ್ಯಾಪಕ ಡಾ. ಶ್ರೀಧರರವರು ಸ್ವಾಗತಿಸಿದರು.
ಎನ್.ಎಸ್.ಎಸ್. ಸ್ವಯಯಂ ಸೇವಕರು, ವಿವಿಧ ಇಲಾಖೆಗಳ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಶಿವಾನಂದ ಮಹಾವಿದ್ಯಾಲಯದಲ್ಲಿ ವರಕವಿ ಬೇಂದ್ರೆಯವರ ೪೩ನೇ ಪುಣ್ಯಸರಣೆ

ಕಾಗವಾಡ: ನಗರದ ಶಿವಾನಂದ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಪ್ರಾಯೋಜಿತ ಕನ್ನಡ ವಿಭಾಗ ವರಕವಿ ಶಬ್ದಗಾರುಡಿಗ ಡಾ. ದ. ರಾ. ಬೇಂದ್ರೆಯವರ ೪೩ನೇ ಪುಣ್ಯಸ್ಮರಣೆಯನ್ನು ಆಯೋಜಿಸಲಾಗಿತ್ತು. ಈ ಸಮಾರಂಭದ ಮುಖ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group