- Advertisement -
ಮೈಸೂರು – ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆ.೧೧ರಂದು ಭಾನುವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೮ಕ್ಕೆ ಸಂಕಲ್ಪ, ೯ಕ್ಕೆ ಅಭಿಷೇಕ, ೧೦.೩೦ಕ್ಕೆ ಅಲಂಕಾರ, ೧೧.೩೦ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ ೧೨.೩೦ಕ್ಕೆ ಶಾತ್ತುಮೊರೈ, ೧ ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ.
ಸಂಜೆ ೭.೩೦ಕ್ಕೆ ಪ್ರಾಕಾರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಮುಖ್ಯಸ್ಥ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿದ್ದಾರೆ. ಮಾಹಿತಿಗೆ ಮೊಬೈಲ್ ೯೩೪೨೧೮೮೩೨೩, ೭೫೯೮೮೩೨೨೭೧ ಸಂಪರ್ಕಿಸಬಹುದು.