spot_img
spot_img

ಬೆಳಗಾವಿ ಪ್ರವಾಹ ; ಬೆಳಗಾವಿ – ಮೀರಜ್ ನಡುವೆ ವಿಶೇಷ ರೈಲು

Must Read

spot_img
- Advertisement -

ಬೆಳಗಾವಿ :ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾ ನದಿಯಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಪರಿಣಾಮವಾಗಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ ಬರುವಂತಹ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿಯಿಂದ ಮಿರಜವರಗೆ ಪ್ಯಾಸೆಂಜರ್ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಗಸ್ಟ್ 1 ರಿಂದ 4 ದಿನಗಳವರೆಗೆ ಪ್ಯಾಸೆಂಜರ್ ವಿಶೇಷ ರೈಲು ಬಿಡಲು ಆದೇಶಿಸಿರುತ್ತಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಮಂಗಳವಾರ ಜು-30ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಬೆಳಗಾವಿ-ಮಿರಜ ರೈಲು ಅ-01 (07301) ಮುಂಜಾನೆ 06 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 09ಕ್ಕೆ ಮಿರಜ ನಿಲ್ದಾಣ ತಲುಪಲಿದೆ.

ಮಿರಜ-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 09.50 ಕ್ಕೆ ಮಿರಜನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
ಬೆಳಗಾವಿ-ಮಿರಜ ರೈಲು (07303) ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮಿರಜ ತಲುಪಲಿದೆ.
ಮಿರಜ-ಬೆಳಗಾವಿ ರೈಲು ಸಂಖ್ಯೆ (07304) ಸಂಜೆ 05.35 ಕ್ಕೆ ಮಿರಜನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿದರು.

- Advertisement -

ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸುವುದಾಗಿ ಈರಣ್ಣ ಕಡಾಡಿ ಹೇಳಿದ್ದಾರೆ

- Advertisement -
- Advertisement -

Latest News

ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ

ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!
Join WhatsApp Group