ಮೂಡಲಗಿ: ಕರ್ನಾಟಕ ಸರ್ಕಾರ ಸಾಕ್ಷರತಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯೋಗದಲ್ಲಿ ಎನ್.ಎಸ್.ಎಫ್ ಪ್ರೌಢಶಾಲೆ, ಕುಲಗೋಡದಲ್ಲಿ ಜರುಗಿದ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯದಲ್ಲಿ ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಸಂಸ್ಥೆಯ ಹೆಸರು ಮತ್ತು ಕೀರ್ತಿಯನ್ನು ತಂದಿರುವ ಈ ಕ್ರೀಡಾಪಟುಗಳಿಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಸವಗೌಡ ಶಿವಗೌಡ ಪಾಟೀಲ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಯರಾದ ಏ.ಆರ್. ಪಾಟೀಲ, ದೈಹಿಕ ಶಿಕ್ಷಣ ಶಿಕ್ಷಕರಾದ ಬಿ.ಎಂ. ಡಬ್ಬನವರ, ಎಲ್ಲ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

