spot_img
spot_img

ಓರೆಕೋರೆ ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವ ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ – ಅಶ್ವತ್ಥ ವೈದ್ಯ

Must Read

- Advertisement -

ಸವದತ್ತಿ ಃ “ಜೀವನದಲ್ಲಿ ದೈಹಿಕ ಮಾನಸಿಕ ಬೆಳವಣಿಗೆಗೆ ಕ್ರೀಡೆ ಅವಶ್ಯಕ. ಕ್ರೀಡಾ ಕ್ಷೇತ್ರವು ಇಚ್ಛಾಶಕ್ತಿ,ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ.ವೈಯುಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ನನ್ನ ಗುರುಗಳಾದ ಸಿದ್ಲಿಂಗನ್ನವರ ಅವರು ನಮಗೆ ಕ್ರೀಡೆ ಹೇಳಿಕೊಟ್ಟ ದಿನಗಳು ನನಗೆ ಇಂದಿಗೂ ನನಪಿನಲ್ಲಿವೆ. ಶಿಸ್ತು.ಸಂಯಮವನ್ನು ನಾವು ಕ್ರೀಡೆಯಿಂದ ಬೆಳೆಸಿಕೊಳ್ಳಲು ಸಾಧ್ಯ ಇಂದು ಭಾಗವಹಿಸಿದ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸ್ಪರ್ಧಾ ಮನೋಭಾವದೊಂದಿಗೆ ಭಾಗವಹಿಸಿ ಸೋಲು ಗೆಲವು ಮುಖ್ಯವಲ್ಲ”ಎಂದು ಸವದತ್ತಿಯ ರಾಜಕೀಯ ದುರೀಣ ಅಶ್ವತ್ಥ ವೈದ್ಯ ಹೇಳಿದರು.

ಅವರು ಪಟ್ಟಣದ ಎಸ್.ಕೆ.ಪ್ರೌಢಶಾಲೆಯ ಆವರಣದಲ್ಲಿ ಜರುಗಿದ ಸವದತ್ತಿ ತಾಲೂಕಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿಗಳಾದ ವೈ.ಎಂ.ಶಿಂಧೆ,  “ಕ್ರೀಡೆಯಲ್ಲಿ ಗೆಲ್ಲಲು ಉತ್ತಮ ತರಬೇತಿ ಅಗತ್ಯ. ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಸೋಲು ಗೆಲುವು ಇದ್ದದ್ದೇ.ಕ್ರೀಡೆಯಲ್ಲಿ ಪರಿಣತಿಯನ್ನು ಗಳಿಸಲು ಸತತ ಪ್ರಯತ್ನ ಅಗತ್ಯ”ಎಂದು ನುಡಿದರು.

- Advertisement -

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡುತ್ತ “ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು.ಮೋಬೈಲ್ ಬಳಕೆ ದೂರ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ.”ಎಂದು ನುಡಿದರು.

ದೈಹಿಕ ಶಿಕ್ಷಕ ಬಿ.ಆರ್. ರಾಠೋಡ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.ಕ್ರೀಡಾ ಜ್ಯೋತಿಯನ್ನು ಅಶ್ವತ್ಥ ವೈದ್ಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ ಪುರಸಭೆ ಅಧ್ಯಕ್ಷೆ ಚನ್ನವ್ವ ಹುಚ್ಚನ್ನವರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಎ,ಪಿ,ಎಂ,ಸಿ ಉಪಾಧ್ಯಕ್ಷರಾದ ಮಾರುತಿ ಬಸಲಿಗುಂದಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ ಕುರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಮೈತ್ರಾದೇವಿ ವಸ್ತ್ರದ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಈರಣ್ಣ ಕಿತ್ತೂರ, ಎಂ. ಎಸ್.ಹೊಂಗಲ, ಪ್ರಶಾಂತ ಹಂಪನ್ನವರ, ಪ್ರಕಾಶ ಹೆಮ್ಮರಡಿ, ಎಫ್ ಜಿ ನವಲಗುಂದ, ನೌಕರರ ಸಂಘದ ಗುಡಗಾರ ರಾಮಣ್ಣ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ,ಎಚ್,ಕಾಮನ್ನವರ, ಆರ್,ಐ,ಸಿಂದ್ಲಿಂಗನ್ನವರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಆರ್.ಎಸ್.ಹಲಗಿ,, ಗೌರವಾಧ್ಯಕ್ಷರಾದ ಮೈಲಾರಪ್ಪ ಚುಂಚನೂರ, ಶಿಕ್ಷಣ ಸಂಯೋಜಕರುಗಳು, ಸಂಪನ್ಮೂಲ ವ್ಯಕ್ತಿಗಳು, ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರು, ಶಿಕ್ಷಕರ ಸಂಘದ ಪದಾಧಿಕಾರಿಗಳು, ದೈಹಿಕ ಶಿಕ್ಷಕ/ಶಿಕ್ಷಕಿಯರು ವಿವಿಧ ಶಾಲೆಗಳ ಶಿಕ್ಷಕರು ಮಕ್ಕಳು ಉಪಸ್ಥಿತರಿದ್ದರು.

ಆರಂಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ಜರುಗಿತು.
ಎಂ.ಎಂ.ಲಕ್ಕನ್ನವರ ನಿರೂಪಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ ದಂಡಿನ ಸ್ವಾಗತಿಸಿದರು. ದೈಹಿಕ ಶಿಕ್ಷಣಾಧಿಕಾರಿ ಎಂ,ಬಿ,ಕೊಪ್ಪದ ವಂದಿಸಿದರು;

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಮುದ್ರ ವಿಹಾರ ತಂದಿತು ಜೀವಕ್ಕೆ ಕುತ್ತು; ನೋಡನೋಡುತ್ತಲೇ ಮುಳುಗಿದ ಬೋಟ್

ಗೋವಾದಂಥ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ಕೊಟ್ಟಾಗ ಅಲ್ಲಿನ ಸಮುದ್ರದಲ್ಲಿ ವಿಹಾರ ಮಾಡುವುದು ಅತ್ಯಂತ ಹೆಚ್ಚಿನ ಬೇಡಿಕೆಯಾಗಿರುತ್ತದೆ. ಹಾಗೆಯೇ ಗೋವಾದಲ್ಲಿ ನಡೆದಿದೆಯೆಂದು ಹೇಳಲಾದ ಬೋಟ್ ಪಯಣ ಅದರ...
- Advertisement -

More Articles Like This

- Advertisement -
close
error: Content is protected !!
Join WhatsApp Group