spot_img
spot_img

ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಪೂರ್ವಭಾವಿ ಸಭೆ

Must Read

- Advertisement -

ಸಿಂದಗಿ: ಮಾ. 23 ರಂದು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಿಸುವ ಕುರಿತು  ತಾಲೂಕು ಜಂಗಮ ಸಂಘದ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಸಮಾಜದ ಅಧ್ಯಕ್ಷರಾದ ಶ್ರೀ ಶಂಕರಲಿಂಗಯ್ಯ ಹಿರೇಮಠ ಮಾತನಾಡಿ, ಅಂದು ಬೆಳಿಗ್ಗೆ 8:00ಗೆ ಸಂಘದ ಕಾರ್ಯಾಲಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮುಖಾಂತರ ತಾಲೂಕು ಆಡಳಿತ ಹಮ್ಮಿಕೊಳ್ಳಲಾಗುತ್ತಿರುವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಚೇರಿಗೆ ಹೋಗುವದು,  ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಮಠಾಧೀಶರು ಪಾಲ್ಗೊಳ್ಳುವರು ಹಾಗೂ ಸಮಾಜದ ಬಂಧುಗಳು  ಭಕ್ತ ವೃಂದವು ಅಪಾರ ಸಂಖ್ಯೆಯಲ್ಲಿ ಭಾಗವಹಿಸುವರು ಕಾರಣ ತಾಲೂಕಿನ ಜಂಗಮ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ಕಾರಣೀಭೂತರಾಗುವಂತೆ ಕರೆ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಶ್ರೀಶೈಲ ನಂದಿಕೋಲ ಕಾರ್ಯದರ್ಶಿಗಳಾದ ಎಂ ಎಂ ಹಿರೇಮಠ ಸಮಾಜದ ಮಹಿಳಾ ಅಧ್ಯಕ್ಷೆ ಶೈಲಜಾ ಸ್ಥಾವರಮಠ ಶ್ರೀ ವೀರಮೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಶರಣಯ್ಯ ಮಠ, ಬಸಯ್ಯ ವಸ್ತ್ರದ, ಬಸಯ್ಯ ಹಿರೇಮಠ ಬಂದಾಳ, ಚೆನ್ನಯ್ಯ ಮಠ ಉಮೇಶ್ ಮಯೂರ್‍ಮಠ ಕುಲೇಕುಮಟಗಿ, ಮಹಾಂತಯ್ಯ ಹಿರೇಮಠ ಬಗಲೂರ್, ಬಿ ಜಿ ಮಠ, ಸಂತೋಷ ನಂದಿಕೋಲ, ಗುರುಬಸಯ್ಯ ಕರ್ಪೂರಮಠ, ಮಲ್ಲಯ್ಯ ಹಿರೇಮಠ ಹಾಗೂ ವಿಶ್ವಾರಾಧ್ಯ ಮಲ್ಲಯ್ಯ ಮಠ, ಗೋಲಗೇರಿ ಹಾಗೂ ವೀರಶೈವ ಲಿಂಗಾಯತ ಸಂಘಟನೆ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಮಹಾದೇವಿ ಹಿರೇಮಠ ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಮ್ಮೆ ತಮ್ಮನ ಕಗ್ಗದ ತಾತ್ಪರ್ಯ

  ಉಪ್ಪಿಷ್ಟು ಹುಳಿಯಿಷ್ಟು ಸಿಹಿಯಿಷ್ಟು ಖಾರಿಷ್ಟು ಸೇರಿದರೆ ಬಹಳರುಚಿ ಮಾಡಿದಡಿಗೆ ಅಳುನಗುವು ಸುಖದುಃಖ ನೋವ್ನಲಿವು ಸೇರಿದರೆ ಅನುಭಾವದಡಿಗೆ ರುಚಿ - ಎಮ್ಮೆತಮ್ಮ ಶಬ್ಧಾರ್ಥ ಅನುಭಾವ = ಅತೀಂದ್ರಿಯವಾದ ಅನುಭವ ತಾತ್ಪರ್ಯ ನಾವು ಮಾಡುವ ಅಡಿಗೆಯಲ್ಲಿ ಷಡ್ರಸಗಳಾದ ಉಪ್ಪು...
- Advertisement -

More Articles Like This

- Advertisement -
close
error: Content is protected !!
Join WhatsApp Group