ಸಿಂದಗಿ: ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳಗೆ ಎಸ್ ಟಿ ಪ್ರಮಾಣ ಪತ್ರದ ಕುರಿತು ಪ್ರಶ್ನೆ ಕೇಳಿದ್ದು ಅದಕ್ಕೆ ಅವರು ತಳವಾರ ಎಸ್‍ಟಿ ಅದನ್ನು ಕೇಳಬೇಡಿ ಬೇರೆ ಪ್ರಶ್ನೆ ಇದ್ದರೆ ಕೇಳಿ ಎಂದು ಪ್ರತಿಕ್ರಿಯಿಸಿದ್ದನ್ನು ವಿವಿಧ ಸಂಘಟನೆಗಳ ಪ್ರಮುಖರು ಉಗ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಖಾಸಗಿ ಹೋಟೆಲ್‍ನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂ.ಸಂಚಾಲಕ ವೈ.ಸಿ.ಮಯೂರ ಮತ್ತು ಟಿಪ್ಪು ಕ್ರಾಂತಿಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಸ್ತಗೀರ ಮುಲ್ಲಾ ಮಾತನಾಡಿ, ಅವರು ತಳವಾರ, ಕೊಲಿ ಸಮುದಾಯಕ್ಕೆ ಎಸ್.ಟಿ. ಪ್ರಮಾಣ ಪತ್ರ ನೀಡುವ ಕುರಿತು ಗೆಜೆಟ್ ಅನುಮೋದನೆಯಾದರೂ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸಿ ಸಮುದಾಯದ ಹಕ್ಕನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿದೆ. ಸತತ ಎರಡು ವರ್ಷಗಳಿಂದ ವಿಭಿನ್ನ ಹೋರಾಟಗಳನ್ನು ಮಾಡುತ್ತಲೇ ಬಂದಿದ್ದೇವೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅಸಡ್ಡೆ ತೋರಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಳವಾರ ಸಮುದಾಯದ ಕ್ಷಮೆ ಕೇಳಬೇಕು ಇಲ್ಲದೆ ಹೋದರೆ ಉಗ್ರ ಹೋರಾಟಕ್ಕೆ ಕರೆ ಕೊಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಉಪ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾದರೆ ಎಸ್‍ಟಿ ಸರ್ಟಿಫಿಕೇಟ್ ನೀಡುತ್ತೇವೆ ಎಂಬ ಅಸ್ತ್ರ ಪ್ರಯೋಗಿಸಿ ಮತಯಾಚನೆ ಮಾಡಬೇಡಿ ಮೊದಲು ಪ್ರಮಾಣ ಪತ್ರ ನೀಡಿ ಎಂದು ಆಗ್ರಹಿಸಿದರು,
ಈ ಸಂದರ್ಭದಲ್ಲಿ ಮಂಜುನಾಥ್ ಎಂಟಮಾನ, ಅರವಿಂದ ನಾಯ್ಕೊಡಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.