ಕ್ಷೇತ್ರದ ಜನರ ಕಷ್ಟಗಳಿಗೆ ಬೆನ್ನೆಲುಬಾಗಿ ನಿಲ್ಲುವೆ : ಡಾ.ವಿಶ್ವನಾಥ ಪಾಟೀಲ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೈಲಹೊಂಗಲ ತಾಲೂಕು ಕೊರೊನಾ ಮುಕ್ತ ಮಾಡಲು ಶ್ರಮಿಸಲು ಸಲಹೆ

ಬೈಲಹೊಂಗಲ – ಮಹಾಮಾರಿ ಕೊರೋನಾ ವೈರಸ್ ಎರಡನೇ ಅಲೆಯಿಂದ ಕಂಗೆಟ್ಟಿರುವ ಕ್ಷೇತ್ರದ ಜನರ ನೆರವಿಗೆ ಬೆನ್ನೆಲುಬಾಗಿ ನಿಲ್ಲುವೆ ಎಂದು ಬೆಳಗಾವಿ ಕಾಡಾ ಅಧ್ಯಕ್ಷ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್‌ ಗಳಿಗೆ ಹಾಗೂ ಆಸ್ಪತ್ರೆಯಲ್ಲಿರುವ ಕೋವಿಡ್ ರೋಗಿಗಳ ಕುಟುಂಬದವರಿಗೆ ಆಹಾರದ ಪಾಕೇಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು.
ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟಲು ಸರಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ನಾಗರಿಕರು ಸಹಕಾರ ನೀಡಿ ವೈರಾಣು ತಡೆಗಟ್ಟಲು ಸಹಕರಿಸಬೇಕು. ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗುವ ಕೊರೋನಾ ರೋಗಿಗಳ ಸಂಬಂಧಿಕರಿಗೆ ಆಹಾರ, ನೀರಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರ ತಂಡ ಪ್ರತಿದಿನ ಆಹಾರ ವಿತರಿಸುವ ಯೋಜನೆ ರೂಪಿಸಿದೆ. ಇದರಿಂದ ರೋಗಿಗಳ ಸಂಬಂಧಿಕರಿಗೆ ಅನುಕೂಲವಾಗಲಿದೆ. ಬೈಲಹೊಂಗಲ ತಾಲೂಕಿನಲ್ಲಿ ಕೋವಿಡ್-19 ಸಮಸ್ಯೆಗಳ ಕುರಿತು ಎರಡುದಿನಕ್ಕೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವ, ಗೋವಿಂದ ಕಾರಜೋಳ ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಮಾಹಿತಿ ನೀಡಲಾಗುತ್ತಿದೆ. ಆಕ್ಸಿಜನ್ ಬೆಡ್‍ಗಳ ಕೊರತೆ, ಸಿಬ್ಬಂದಿಗಳ ಕೊರತೆ, ಔಷಧ ಕೊರತೆಗಳ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಸಮಸ್ಯೆಯಾಗದಂತೆ ಕ್ರಮವಹಿಸುವುದಾಗಿ ಸಚಿವರು, ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಕೆಲವರು ಮಾಹಿತಿ ನೀಡಿದಾಗ ಸ್ವತಃ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿರುವೆ. ಈ ಕುರಿತು ಉಸ್ತುವಾರಿ ಸಚಿವರ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಕೋವಿಡ್-19 ಕುರಿತು ಭಯ ಬೇಡ ಜಾಗೃತಿ ಇರಲಿ. ದೈರ್ಯದಿಂದ ಕೊರೊನಾ ಎದುರಿಸಬೇಕಾಗಿದೆ. ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ತಿರಗಾಡುವುದನ್ನು ಬಂದ್ ಮಾಡಿ. ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬರಬೇಕು. ಹೊರಗೆ ಬರುವಾಗ ಕಡ್ಡಾಯವಾಗಿ ಎರಡು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆಗೆ ಹೆಚ್ಚಿನ ಒತ್ತು ನೀಡಿ ಬೈಲಹೊಂಗಲ ತಾಲೂಕು ಕೊರೊನಾ ಮುಕ್ತ ಮಾಡಲು ಶ್ರಮಿಸೋಣ ಎಂದರು. ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದು ಪೊಲೀಸರ ಅತಿಥಿಯಾಗುವುದನ್ನು ತಪ್ಪಿಸಿ ಸುರಕ್ಷಿತವಾಗಿ ಮನೆಯಲ್ಲಿ ಇರಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮಂಡಲ ಅಧ್ಯಕ್ಷ ಮಡಿವಾಳಪ್ಪ ಹೋಟಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ನೇಸರಗಿ, ಪುರಸಭೆ ಸದಸ್ಯ ಸುಧೀರ ವಾಲಿ, ಆನಂದ ಮೂಗಿ, ವಕೀಲರಾದ ಚನ್ನಬಸಪ್ಪ ಈಟಿ, ಸುನೀಲ ಈಟಿ, ವೀರೇಶ ಹಲಕಿ, ಬಸವರಾಜ ಜಿಗಜಿನ್ನಿ, ಶಿವಪ್ರಸಾದ ಪಾಟೀಲ, ಅಶೋಕ ಗುಂಡ್ಲೂರ ಉಪಸ್ಥಿತರಿದ್ದರು.

ತುರ್ತು ಸೇವೆಗಳಿಗಾಗಿ ಸಹಾಯವಾಣಿ: ಡಾ.ವಿಶ್ವನಾಥ ಪಾಟೀಲ ಅಭಿಮಾನಿ ಬಳಗದಿಂದ ಕೋವಿಡ್-19 ಕುರಿತು ತುರ್ತು ಸೇವೆಗಳಿಗಾಗಿ ಸಹಾಯವಾಣಿ ತೆರೆಯಲಾಗಿದೆ. ಇದರಿಂದ ಆಸ್ಪತ್ರೆಯಲ್ಲಿ ದಾಖಲಾದ ಕೋವಿಡ್ ರೋಗಿಗಳ ಸಂಬಂಧಿಕರಿಗೆ ಊಟದ ವ್ಯವಸ್ಥೆ, ಆಕ್ಸಿಜನ್ ಬೆಡ್ ವ್ಯವಸ್ಥೆ, ಅವಶ್ಯಕ ಮೆಡಿಸಿನ್ ಕಿಟ್ ಒದಗಿಸುವ ಕಾರ್ಯಹಮ್ಮಿಕೊಳ್ಳಲಾಗಿದೆ.

ಯಾರಿಗಾದರೂ ಸಮಸ್ಯೆಯಾದರೆ ಬಿಜೆಪಿ ಕಾರ್ಯಕರ್ತರಾದ ನಾರಾಯಣ ರಣಶಿಂಗ್ ಮೊ.9902770966, ರಾಜೇಶ ಜಂಬಗಿ ಮೊ.8904343957, ಶಿವಪ್ರಸಾದ ಪಾಟೀಲ ಮೊ.8147270191, ಆದರ್ಶ ಗುಂಡಗವಿ ಮೊ.8660230665, ಬಸವರಾಜ ನೇಸರಗಿ ಮೊ.9632549143, ಸುನೀಲ್ ಈಟಿ ಮೊ.8197475050 ಇವರನ್ನು ಸಂಪರ್ಕಿಸಿ ಸಹಾಯ ಪಡೆಯಬಹುದಾಗಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!