ಸಿಂದಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು, ಸ್ವರ್ಣಭೂಮಿ ಫೌಂಡೇಶನ್, ಕರ್ನಾಟಕ ಹಾಗೂ ರೋಟರಿ ಕ್ಲಬ್, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಜ.11 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನ, ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಕನ್ನಡ ಹಬ್ಬ-2026, ಪುಸ್ತಕ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ನಡೆಯಲಿದೆ.
ಇದೇ ವೇಳೆ ತಾಲೂಕಿನ ಬೋರಗಿ ಗ್ರಾಮದ (ಬೆಂಗಳೂರಿನಲ್ಲಿ ಹೆಡ್ ಕಾನ್ಸ್‌ಟೇಬಲ್) ಮೌಲಾಲಿ ಕೆ.ಆಲಗೂರ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಸ್ವರ್ಣಭೂಮಿ ಸ್ಟಾರ್ ಅಚೀವರ್ಸ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸ್ವರ್ಣಭೂಮಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಬಿ. ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

