ಬೀದರ – ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆಯುತ್ತಿರುವ ಅದ್ಧೂರಿ ಸಂಭ್ರಮಾಚರಣೆಗೆ ಬಿಜೆಪಿ ಜಿಲ್ಲಾ ಸಹ ವಕ್ತಾರ ಗುರುನಾಥ ರಾಜಗೀರಾ ಕುಹಕವಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹೇಳಿಕೊಳ್ಳುವಂತಹ ಯಾವುದೆ ಸಾಧನೆಗಳಾಗಿಲ್ಲ ಹಾಲು, ನೀರು, ವಿದ್ಯುತ್, ಪೆಟ್ರೋಲ್, ಡಿಸೇಲ್, ಆಸ್ತಿ ತೆರಿಗೆ ಹೀಗೆ ಎಲ್ಲ ದಿನಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಬಡವರು ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಹಾಕಿರುವುದೆ ಇವರ ಬಹುದೊಡ್ಡ ಸಾಧನೆಯಾಗಿದೆ ಇದರ ನಡುವೆ ಸಂಭ್ರಮಾಚರಣೆ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು ಎಂದಿದ್ದಾರೆ.