ಮೂಡಲಗಿ: ಎಸ್.ಎಸ್.ಎಲ್.ಸಿ ಯಲ್ಲಿ ಶ್ರೇಷ್ಠ ಸಾಧನೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅತ್ಯುತ್ತಮ ದಾಖಲಾತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ವಿವಿಧ ಸಾಧನೆಗಳನ್ನು ಪರಿಗಣಿಸಿ ಮೂಡಲಗಿ ತಾಲೂಕಿನ ರಾಜಾಪೂರ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಮಟ್ಟದ ಶೈಕ್ಷಣಿಕ ಸಾಧನೆ ಮಾಡಿದ ಅತ್ಯುತ್ತಮ ಶಾಲೆ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಪ್ಯಾಪ್ ಇಂಡಿಯಾ, ಚಂಡಿಗಢ ವಿಶ್ವವಿದ್ಯಾಲಯ, ಯುಪಿಎಸ್ಸಿ ಕೇರಳ, ಸಿಬಿಎಸ್‌ಸಿ ಶಾಲೆಗಳ ಒಕ್ಕೂಟ ತಮಿಳುನಾಡು, ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕ್ಯಾಂಪ್ ಬೆಂಗಳೂರ, ಶಿಕ್ಷಣ ಸಂಸ್ಥೆಗಳ ಒಕ್ಕೂಟ ಜಮ್ಮು ಕಾಶ್ಮೀರ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಚಾನ್ಸರಿ ಪೆವಿಲಿಯನ್ ಪಂಚತಾರಾ ಹೊಟೆಲಿನಲ್ಲಿ ಬುಧವಾರದಂದು ನಡೆದ ರಾಷ್ಟ್ರಮಟ್ಟದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಜ್ಞಾನ ಗಂಗೋತ್ರಿ ಶಾಲೆಗೆ ರಾಜ್ಯಮಟ್ಟದ ಶ್ರೇಷ್ಠ ಸಾಧಕ ಶಾಲೆ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇದೇ ಸಂದರ್ಭದಲ್ಲಿ ಶಾಲೆಯ ಪ್ರೌಢ ವಿಭಾಗದ ಪ್ರಧಾನ ಗುರುಗಳಾದ ಯುವರಾಜ ಸಿದಬಾಗೋಳ ಇವರಿಗೆ ಉತ್ತಮ ಆಡಳಿತಗಾರರು ರಾಜ್ಯ ಮಟ್ಟದ ಉತ್ತಮ ಪ್ರಾಚಾರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಹಾಗೂ ರಾಮು ಜಿ ಗೌಡ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನಿಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ತ್ರಿಲೋಕ ಚಂದ್ರ, ಫ್ಯಾಫ್ ಇಂಡಿಯಾ ಅಧ್ಯಕ್ಷ ಜಗಜಿತ್ ಸಿಂಗ್ ಚಂಡಿಗಡ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಆರ್.ಎಸ್.ಭಾವಾ. ಕ್ಯಾಮ್ಸನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್. ಇಸ್ರೋದ ಮಾಜಿ ಅಧ್ಯಕ್ಷ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಕಿರಣ್ ಎ ಎಸ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ಪ್ರಧಾನ ಮಾಡಿ ಶೈಕ್ಷಣಿಕ ಸಾಧನೆಯನ್ನು ಅಭಿನಂದಿಸಿದರು..
ಈ ಪ್ರಶಸ್ತಿಯನ್ನು ಸಂಸ್ಥೆಯ ಅಧ್ಯಕ್ಷ ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಮತ್ತು ಪ್ರಧಾನ ಗುರುಗಳು ಅತ್ಯಂತ ಹರ್ಷದಿಂದ ಸ್ವೀಕರಿಸಿದರು.
* ಮೊದಲಿನಿಂದಲೂ ಶಾಲೆಯ ಆಡಳಿತ ಮಂಡಳಿ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉತ್ತಮ ಕೆಲಸವನ್ನು ನಿರ್ವಹಣೆ ಮಾಡುತ್ತಾ ಬಂದಿದ್ದಾರೆ ಹಾಗೂ ಕಳೆದೆರಡು ವರ್ಷಗಳಿಂದ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಸಾಧನೆಯನ್ನು ಮಾಡಿದ ಶಾಲೆಯದಾಗಿದ್ದು. ಈ ಶಾಲೆಗೆ ಸಂದಿರುವ ಗೌರವ ನಮ್ಮ ವಲಯದ ಕಲಿಕೆಯ ಗುಣಮಟ್ಟಕ್ಕೆ ಸಂದ ಗೌರವ ಎಂದು ಭಾವಿಸುತ್ತೇನೆ. ಶಾಲೆಯ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳು.
ಅಜೀತ ಮನ್ನಿಕೇರಿ
ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೂಡಲಗಿ