ಶಿಕ್ಷಕ ಮಾರುತಿ ದೇಸಾಯಿಗೆ ರಾಜ್ಯಮಟ್ಟದ ಪ್ರಶಸ್ತಿ

Must Read

ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ಶ್ರೀ ಮಹಾಲಿಂಗೇಶ್ವರ ಶಾಲೆಯ ಹಿಂದಿ ಶಿಕ್ಷಕ ಮಾರುತಿ ದೇಸಾಯಿಯವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಇವರು ಕೊಡಮಾಡುವ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ೨೦೨೫ ಪ್ರಶಸ್ತಿಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.

ಇದೇ ತಿಂಗಳ ೧೪ ರಂದು ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆಯುವ ರಾಜ್ಯ ಸಮಾವೇಶದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಮಾರುತಿ ದೇಸಾಯಿಯವರು ಮೂಲತಃ ಗೋಕಾಕ ಗ್ರಾಮದವರಾಗಿದ್ದು ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ರಾಷ್ಟ್ರಮಟ್ಟದ ಕಾರ್ಯಾಗಾರದಲ್ಲಿ ಭಾಗವಹಿಸಿದ್ದು, ಹಿಂದಿ ಕನ್ನಡ ಭಾಷೆಗಳಲ್ಲಿ ಮಕ್ಕಳ ಕವನ ಸಂಕಲನ ಭಕ್ತಿಗೀತೆಗಳು, ಕಗ್ಗಗಳು ಹಾಗೂ ತ್ರಿಪದಿಗಳನ್ನು ರಚಿಸಿದ್ದು, ಅನೇಕ ಪ್ರಶಸ್ತಿಗಳು ಅರಸಿ ಬಂದಿವೆ.

ಮಾರುತಿಯವರಿಗೆ ರಾಜ್ಯಮಟ್ಟದ ಪ್ರಶಸ್ತಿ ದೊರೆತಿರುವುದಕ್ಕೆ ಜಿಲ್ಲಾ ಅದ್ಯಕ್ಷ ವಾಯ್ ಬಿ ಹಂಡಿ ಹಾಗೂ ಕಾರ್ಯದರ್ಶಿ ಜಿ.ಎಮ್.ಬಡಿಗೇರ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group