ಸಿಂದಗಿ- ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣಶಾಸ್ತ್ರ ಉಪನ್ಯಾಸಕರ ಸಂಘ ಬೆಂಗಳೂರು ಹಾಗೂ ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಸಿಂದಗಿ ಇವುಗಳ ಸಹಯೋಗದಲ್ಲಿ ೧೫ ನೇ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವು ಡಿ೨೭ ರಂದು ಬೆಳಗ್ಗೆ ೧೦.೦೦ ಗಂಟೆಗೆ ಸಿಂದಗಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ಜರುಗಲಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣಶಾಸ್ತ್ರ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎ.ಆರ್.ಹೆಗ್ಗನದೊಡ್ಡಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಸ್ಥಳೀಯ ಸಾರಂಗಮಠದ ಪೂಜ್ಯ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ, ಶಾಸಕ ಅಶೋಕ ಮನಗೂಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ, ವಿಜಯಪುರದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಸಿ.ಕೆ.ಹೊಸಮನಿ, ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಜಿಲ್ಲಾ ಪ್ರಾಚಾರ್ಯರ ಮಹಾಮಂಡಳದ ಜಿಲ್ಲಾಧ್ಯಕ್ಷ ಕೆ.ಎ.ಉಪ್ಪಾರ, ಡಾ.ನಾಗರಾಜ ಮರೆಣ್ಣವರ ಸೇರಿದಂತೆ ಅನೇಕರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.
ಮಧ್ಯಾಹ್ನ ೧೨ ಗಂಟೆಗೆ ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವ ವಿಧಾನಗಳು ವಿಷಯದ ಕುರಿತು ಗೋಷ್ಠಿ ಜರುಗಲಿದ್ದು ಜಿಲ್ಲಾ ಕಸಪಾದ ಕಾರ್ಯದರ್ಶಿ ಡಾ.ಮಾಧವ ಗುಡಿ ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ಸಾಹಿತಿ ಹ.ಮ.ಪೂಜಾರ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ನೀಲನಕ್ಷೆ ಆಧಾರಿತ ಮಾದರಿ ಪ್ರಶ್ನೆ ಪತ್ರಿಕೆಗಳ ಸಿದ್ದತೆ ಕುರಿತಾಗಿ ಗೋಷ್ಠಿ ನಡೆಯಲಿದ್ದು ದಾಂಡೇಲಿಯ ಜನತಾ ವಿದ್ಯಾಲಯ ಪಪೂ ಕಾಲೇಜಿನ ಉಪನ್ಯಾಸಕಿ ನಿರೂಪಮಾ ನಾಯಕ ಉಪನ್ಯಾಸ ನೀಡಲಿದ್ದಾರೆ ಹಾಗೂ ಬೀದರನ ಶಾಂತಿವರ್ಧಕ ಪಪೂ ಕಾಲೇಜಿನ ಶಿವಾಜಿ ಆರ್.ಎಚ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ ೪ ಗಂಟೆಗೆ ಫಲಿತಾಂಶ ಸುಧಾರಣೆಯಲ್ಲಿ ಪ್ರಶ್ನೆಕೋಶದ ಪರಿಣಾಮಕಾರಿ ಬಳಕೆ ಕುರಿತಾಗಿ ಹೊಸಕೇರಿಯ ರಾಜಪ್ಪ ಎಮ್.ಅವರು ಉಪನ್ಯಾಸ ನೀಡಲಿದ್ದಾರೆ. ನಿಕಟ ಪೂರ್ವ ರಾಜ್ಯಾಧ್ಯಕ್ಷ ಎಸ್.ಕೋಟ್ರೇಶ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ನಿವೃತ್ತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಅವರು ಮುಖ್ಯ ಅತಿಥಿಗಳಾಗಿ ಹಾಗೂ ಅತಿಥಿಗಳಾಗಿ ವಿಜಯಪುರದ ಪಿಡಿಜೆ ಕಾಲೇಜಿನ ಉಪನ್ಯಾಸಕ ಎನ್.ಬಿ.ಅವದಾನಿ ಅತಿಯಾ ಕೌಸರ, ಎಸ್.ಎಸ್.ರಾಯಾನಾಯಣಕರ, ರಘು ಎಚ್.ಕೆ ಅವರು ಭಾಗವಹಿಸಲಿದ್ದಾರೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣಶಾಸ್ತ್ರ ಉಪನ್ಯಾಸಕರು ಬಾಗವಹಿಸಬೇಕು ಎಂದು ಕರೆ ನೀಡಿದ್ದಾರೆ.

