- Advertisement -
ಸವದತ್ತಿ :- ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯವರು ಕೊಂಡಜ್ಜಿ ಬಸಪ್ಪ ಸಭಾಂಗಣ ಶಾಂತಿಗೃಹ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕ ಎನ್.ಎನ್.ಕಬ್ಬೂರ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆ, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಹಾಗೂ ಉತ್ತಮ ರೀತಿಯಲ್ಲಿ ತಾಲೂಕಾ ಘಟಕವನ್ನು ಮುನ್ನಡೆಸುತ್ತಿರುವ ಕಾರಣದಿಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂದ್ಯ ಉಪಾಧ್ಯಕ್ಷರಾದ ಕೊಂಡಜ್ಜಿ ಬಿ ಷಣ್ಮುಗಪ್ಪ ನಿರ್ದೇಶಕರಾದ ವಿ.ಸುಮಂಗಲಾ ಮತ್ತು ಜಿ.ಆರ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಗೀತಾ ರಾಮಾನುಜ ಇವರ ಸಮ್ಮುಖದಲ್ಲಿ ಗೌರವಿಸಲಾಯಿತು.