ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಅಂಗಡಿಗೆ  ಬೆಂಕಿ

Must Read

ಸಿಂದಗಿ: ವಿದ್ಯುತ್ ಶಾರ್ಟ್ ಸರ್ಕಿಟ್‍ದಿಂದಾಗಿ ನೀರಿನ ಫಿಲ್ಟರ್ ಘಟಕ ಹೊತ್ತಿ ಉರಿದ ಘಟನೆ ಸಿಂದಗಿ ಪಟ್ಟಣದ ವಿಜಯಪುರ ರಸ್ತೆಯ ಇಕ್ಬಾಲ್ ಮುತ್ತಗಿ ಎಂಬುವವರ ಎಂಟರ್ ಪ್ರೈಸಸ್‍ನಲ್ಲಿ ರವಿವಾರ ಸಂಭವಿಸಿದೆ.

ಒಂದು ಗಂಟೆಗೂ ಹೆಚ್ಚು ಕಾಲ ಅಂಗಡಿ ಹೊತ್ತಿ ಉರಿದ ಪರಿಣಾಮ ಅಂಗಡಿಯಲ್ಲಿದ್ದ ನೀರಿನಕ್ಯಾನ್, ವಾಟರ್ ಫಿಲ್ಟರ್, ಫ್ರಿಡ್ಜ್,ಫೋಮ್, ಇತ್ಯಾದಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಂಗಡಿ ಮುಚ್ಚಿದ್ದ ಪರಿಣಾಮ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ರೂಪಾಯಿಗಳ ಹಾನಿಯಾಗಿದೆ ಎಂದು ಅಂಗಡಿ ಮಾಲಿಕರು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಳ್ಳುತ್ತಿರುವುದನ್ನು ಕಂಡು ಹೊರಗಿನ ಜನ ಕೂಗಲು ಆರಂಭಿಸಿದ್ದಾರೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಯವರು ಆಗಮಿಸಿ ಸುಮಾರು ಇಪ್ಪತ್ತು ಅಡಿಯಷ್ಟು ಉರಿಯುತ್ತಿರುವ ಬೆಂಕಿಯ ಜ್ವಾಲೆಯನ್ನು ನಂದಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group