ಹೆಣ್ಣು ಮಗಳನ್ನ ಕೊಂದ ರಾಕ್ಷಸನಿಗೆ ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ
ಸಿಂದಗಿ; ಹುಬ್ಬಳ್ಳಿಯಲ್ಲಿ ನಡೆದ ನಮ್ಮ ಸಹೋದರಿ ಕುಮಾರಿ ನೇಹಾ ಹಿರೇಮಠ ಅವಳ ಬರ್ಬರ್ ಹತ್ಯೆ ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಟೈರ್‍ಗೆ ಬೆಂಕಿ ಹಚ್ಚಿ ಆರೋಪಿಗೆ ಗಲ್ಲು ಶಿಕ್ಷೆಯನ್ನು ಮಾಡಬೇಕು ಎಂದು ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರ ಇಂದ್ರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಭಾಜಪ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ವಿದ್ಯಾರ್ಥಿನಿಯನ್ನು 9 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದ ಹಾಕಿದ ಲವ್ ಜಿಹಾದಿ ಫಯಾಜ್ ಆರೋಪಿಗೆ ಸಾರ್ವಜನಿಕವಾಗಿ ಗಲ್ಲು ಶಿಕ್ಷೆಗೆ ಹಾಕಬೇಕು ಅಂದ್ರೆ ಮುಂದೆ ಇಂತಹ ಪ್ರಮಾದ ಆಗುವುದಿಲ್ಲ ಕಾರಣ ಗೃಹ ಇಲಾಖೆ ಈ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದು ಇನ್ನೂ ಕೆಲ ಆರೋಪಿಗಳು ತಲೆ ಮರೆಸಿಕೊಂಡಿದ್ದು ಅವರನ್ನು ಬಂಧಿಸಿ ಹೆಡೆಮುರಿ ಕಟ್ಟಬೇಕು ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಲಿಂಬೆ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಗುರು ತಳವಾರ, ಸಿದ್ರಾಮ ಆನಗೊಂಡ, ಮಹಿಳಾ ಮಂಡಲ ಅದ್ಯಕ್ಷೆ ನಿಲ್ಲಮ್ಮ ಯಡ್ರಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಕುದರಗೊಂಡ, ಎಸ್ ಆರ್ ಪಾಟೀಲ್, ಅಶೋಕ ನಾರಾಯಣಪುರ, ಬಸನಗೌಡ ಪಾಟೀಲ, ಶ್ರೀಶೈಲಗೌಡ ಬಿರಾದಾರ, ಜಂಗಮ ಸಮಾಜದ ಅಧ್ಯಕ್ಷ ಶಂಕ್ರಯ್ಯ ಹಿರೇಮಠ ಮಾತನಾಡಿ, ಈ ನೆಲದಲ್ಲಿ ಹೆಣ್ಣು ಮಕ್ಕಳಿಗೆ ಮುಟ್ಟಿದ್ದರೇ ಹತ್ಯೆ ಮಾಡಿದರೆ ಅಂತವರ ಆಸ್ತಿ ಜಪ್ತಿ ಮಾಡಬೇಕು ಎಂದು ಆಗ್ರಹಿಸಿದರು
ಈ ಸಂದರ್ಭದಲ್ಲಿ ಚೇತನ ರಾಂಪೂರ, ಸಿದ್ದಲಿಂಗಯ್ಯ ಹಿರೇಮಠ, ಪರಸುರಾಮ ಗೂಳೂರ, ನೂರಾರು ಕಾರ್ಯಕರ್ತರು ಮಹಿಳೆಯರು ಹಾಗೂ ನಾಗರಿಕರು ಹಾಜರಿದ್ದರು