spot_img
spot_img

ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳಿಂದ ಧರಣಿ

Must Read

- Advertisement -

ಮೂಡಲಗಿ: ಮೂಡಲಗಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಹಾಸ್ಟೆಲ್ ವಿದ್ಯಾರ್ಥಿಗಳು, ಉಪವಾಸ ಸತ್ಯಾಗ್ರಹಕ್ಕೆ ಕುಳಿತ ವಿಷಯ ತಿಳಿದು ಎಬಿವಿಪಿ ಮೂಡಲಗಿ ಶಾಖೆಯ ಕಾರ್ಯಕರ್ತರು ಧರಣಿ ಸತ್ಯಾಗ್ರಹದಲ್ಲಿ ತಾವು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ವಸತಿ ನಿಲಯವನ್ನು ವೀಕ್ಷಿಸಿ ದುರವಸ್ಥೆಯನ್ನು ಅವಲೋಕಿಸಿ ವಸತಿ ನಿಲಯಕ್ಕೆ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಯಾಕೆ ಕಲ್ಪಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು

ಎಬಿವಿಪಿ ಮೂಡಲಗಿ ಶಾಖೆಯ ವತಿಯಿಂದ ಹಾಸ್ಟೆಲ್ ನಲ್ಲಿ ಖಾಯಂ ನೇಮಕಾತಿ ಮತ್ತು ವಸತಿ ನಿಲಯದಲ್ಲಿ ಮುಂದಾಗಬೇಕಾದ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿ ಶೀಘ್ರವೇ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ವಿದ್ಯಾರ್ಥಿಗಳ ಬೇಡಿಕೆಗಳಿಗೆ ಅಧಿಕಾರಿಗಳು ಸ್ಪಂದಿಸಿದ್ದರಿಂದ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಹಿಂತೆಗೆದುಕೊಂಡರು.

ಈ ಸಂಧರ್ಭದಲ್ಲಿ ಎಬಿವಿಪಿ ಸಂಘಟನೆಯ ಪ್ರಮುಖರಾದ ಮಲ್ಲು ಮುಕುಂದ, ಬಸವರಾಜ ಜೋಡಟ್ಟಿ, ಮಹಾದೇವ ನವಣಿ, ಸೂರಜ್ ರಬಕವಿ, ಗಿರೀಶ ಬಳಿಗಾರ, ಬಸವರಾಜ ಕೇಣಿ, ಗುರು ಹಿರೇಮಠ, ಶಿವು ಹಿರೇಮಠ ಸೇರಿದಂತೆ ಇನ್ನು ಅನೇಕ ಎಬಿವಿಪಿ ಕಾರ್ಯಕರ್ತರು ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳು ಹಾಜರಿದ್ದರು.

- Advertisement -
- Advertisement -

Latest News

ಸೌರ ವಿದ್ಯುತ್ ಉತ್ಪಾದನೆ ಮಾಹಿತಿ ಕಾರ್ಯಾಗಾರ

ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಶಕ್ತಿನಗರದ ಅಭಿಯಂತರುಗಳಿಗೆ ಹಾಗೂ, ರಾಯಚೂರು ಜಿಲ್ಲೆಯ ವಿವಿಧ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ "ಸುಸ್ಥಿರ ಹಸಿರು ವಿದ್ಯುಚ್ಛಕ್ತಿ ಉತ್ಪಾದನೆಗೆ ಸೌರಶಕ್ತಿ ಬಳಕೆ"...
- Advertisement -

More Articles Like This

- Advertisement -
close
error: Content is protected !!
Join WhatsApp Group