spot_img
spot_img

ದಿಢೀರ್ ಪರೀಕ್ಷಾ ಕೇಂದ್ರ ಬದಲಿಸಿದ ಕ್ರಮಕ್ಕೆ ವಿದ್ಯಾರ್ಥಿಗಳ ಪ್ರತಿಭಟನೆ

Must Read

- Advertisement -

ಶಾಸಕ ಬಾಲಚಂದ್ರ ಜಾರಕಿಹೊಳಿ ಮಧ್ಯಸ್ಥಿಕೆಯಿಂದ ಪ್ರತಿಭಟನೆ ಕೈಬಿಟ್ಟ ವಿದ್ಯಾರ್ಥಿಗಳು

ಮೂಡಲಗಿ: ಪಟ್ಟಣದ ಎಮ್‌ಇಎಸ್ ಕಾಲೇಜಿನ ಬಿಎ ಪದವಿ ವಿದ್ಯಾರ್ಥಿಗಳ ಮಾ.22ರಿಂದ ನಡೆಯುವ ಪರೀಕ್ಷಾ ಕೇಂದ್ರವನ್ನು ರದ್ದು ಮಾಡಿ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸೋಮವಾರ ಸಂಜೆ ನಾಲ್ಕು ಗಂಟೆಯಿಂದ ತಹಶೀಲ್ದಾರ ಕಚೇರಿಯ ಮುಂದೆ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಮಧ್ಯಸ್ಥಿಕೆಯಿಂದ ವಿದ್ಯಾರ್ಥಿಗಳು ಮೊಟಕುಗೊಳಿಸಿದ್ದಾರೆ.

ಸೋಮವಾರದಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳು ಬಿಎ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಎಮ್‌ಇಎಸ್ ಕಾಲೇಜಿನ ಬಿಎ ವಿದ್ಯಾರ್ಥಿಗಳು, ತಹಶೀಲ್ದಾರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ಪರೀಕ್ಷಾ ಕೇಂದ್ರದ ವರ್ಗಾವಣೆ ಆದೇಶವನ್ನು ರದ್ದು ಮಾಡಬೇಕೆಂದು ಆಗ್ರಹಿಸಿ, ಕುಲಪತಿಗಳ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಸಿದರು.

- Advertisement -

ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಮೇಘಾ ಗುಡ್ಲಿ ಮಾತನಾಡಿ, ತಾಲೂಕಿನ ದೂರದ ಹಳ್ಳಿಗಳಿಂದ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಪಟ್ಟಣದ ಎಮ್‌ಇಎಸ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬರುತ್ತಾರೆ. ಆದರೆ ಏಕಾಏಕಿ ಪರೀಕ್ಷಾ ಕೇಂದ್ರವನ್ನು ರದ್ದು ಮಾಡಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ವಸತಿ ನಿಲಯದಲ್ಲಿ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯಕ್ಕೆ ತಲುಪಲು ಸಮಸ್ಯೆಯಾಗುವುದರಿಂದ ಕೂಡಲೇ ಕೇಂದ್ರ ವರ್ಗಾವಣೆ ಆದೇಶವನ್ನು ರದ್ದು ಮಾಡಿ, ಮೊದಲು ನಡೆಯುತ್ತಿದ್ದ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ನಡೆಸಲು ಆದೇಶ ನೀಡಬೇಕೆಂದು ಆಗ್ರಹಿಸಿದರು.

ಎಬಿವಿಪಿ ಬೆಳಗಾವಿ ವಿಭಾಗದ ಸಹಸಂಚಾಲಕ ಮಲ್ಲು ಮುಕುಂದ ಮಾತನಾಡಿ, ಮಾ.22ರಂದು ನಡೆಯುವ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರವನ್ನು ದಿಢೀರನೆ ವರ್ಗಾವಣೆ ಮಾಡಿದ್ದು, ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ದೂರದ ವಿದ್ಯಾರ್ಥಿಗಳಿಗೆ ಮೊದಲೇ ಸಾರಿಗೆ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು, ಇಂತಹ ಸಂದರ್ಭದಲ್ಲೇ ಪರೀಕ್ಷಾ ಕೇಂದ್ರವನ್ನು ವರ್ಗಾವಣೆ ಮಾಡಿದ್ದರಿಂದ ಮತ್ತಷ್ಟು ಇಕ್ಕಟ್ಟಿಗೆ ಸಿಲುಕುವಂತಾಗಿದೆ ವಿದ್ಯಾರ್ಥಿಗಳ ಬಾಳು ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ವರ್ಗಾವಣೆ ಮಾಡಿರುವ ಆದೇಶವನ್ನು ಕೂಡಲೇ ಹಿಂಪಡೆಯುವವರೆಗೂ ಅಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

- Advertisement -

ಮೂಡಲಗಿ ತಹಶೀಲ್ದಾರ ಡಿ ಜಿ ಮಹಾತ್ ಅವರು, ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಗಮನಕ್ಕೆ ತಂದ ಹಿನ್ನೆಲೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳು ಮಾ.22 ಹಾಗೂ 23ರಂದು ನಡೆಯುವ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದರು. ಈ ಬಗ್ಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಪ್ರತಿಭಟನೆಯನ್ನು ಕೈ ಬಿಡುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಆರ್ ಪಿ ಸೋನವಾಲ್ಕರ, ಎಬಿವಿಪಿ ಕಾರ್ಯಕರ್ತರಾದ ಬಸವರಾಜ ಜೋಡಟ್ಟಿ, ಮಹಾದೇವ ನವಣಿ, ಗಿರೀಶ ಬಳಿಗಾರ, ಬಸವರಾಜ ಕೋಣಿ, ಗುರು ಹಿರೇಮಠ, ಹಣಮಂತ ಗುರವ್, ಸುಜಾತಾ ಪಟ್ಟಣಶೆಟ್ಟಿ, ಗಾಯಿತ್ರಿ ಸಲಭನ್ನವರ, ಗಂಗುಬಾಯಿ ಚಿಮ್ಮಡಿ, ಈಶ್ವರಿ ದಂಡಪ್ಪನ್ನವರ, ಅನ್ನಪೂರ್ಣ ಮಂಡರ ಹಾಗೂ ಅನೇಕ ಕಾರ್ಯಕರ್ತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕನ್ನಡದ ಕುಲುಗುರು ಪ್ರೊ. ಶಿ ಶಿ ಬಸವನಾಳರು

ಕನ್ನಡದ ಕುಲು ಗುರು ಶ್ರೇಷ್ಠ ಸಂಶೋಧಕ ಕನ್ನಡದ ಕಟ್ಟಾಳು ಅಪ್ಪಟ ಬಸವ ಭಕ್ತ ಮತ್ತು ಕೆ ಎಲ್ ಈ ಸಂಸ್ಥೆಯ ಸ್ಥಾಪಕ ಸದಸ್ಯ ಕರ್ನಾಟಕ ವಿಶ್ವ...
- Advertisement -

More Articles Like This

- Advertisement -
close
error: Content is protected !!
Join WhatsApp Group