ಅರಳಿಮಟ್ಟಿ ಶಾಲೆಯ ಮಕ್ಕಳು ರಾಷ್ಟ್ರ ಮಟ್ಟದ ಕಲಾ ಉತ್ಸವಕ್ಕೆ ಆಯ್ಕೆ

Must Read

ಮೂಡಲಗಿ: ತಾಲ್ಲೂಕಿನ ಅರಳಿಮಟ್ಟಿ ಪಿಎಂಶ್ರೀ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ನವದೆಹಲಿಯ ಎನ್‌ಸಿಆರ್‌ಟಿ ಹಾಗೂ ಶಾಲಾ ಶಿಕ್ಷಣ ಸಚಿವಾಲಯ ನಡೆಸುವ ಕಲಾ ಉತ್ಸವ ಸ್ಪರ್ಧೆಯ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿರುವರು.

ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಾದ ಲವಿತ ಹಳಿಂಗಳಿ, ಕಿರಣ ಕುರಬಳ್ಳಿ, ರಂಗೇಶ ನೀಲಪ್ಪಗೋಳ, ಸಂತೋ಼ಷ ಲಗಳಿ ಪುಣೆಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಲಾ ಉತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿಲಿದ್ದಾರೆ ಎಂದು ತರಬೇತಿ ನೀಡಿರುವ ಚಿತ್ರಕಲಾ ಶಿಕ್ಷಕಿ ಶೋಭಾ ಧಡೂತಿ ತಿಳಿಸಿದ್ದಾರೆ.

ಕಲಾ ಉತ್ಸವದ ಜಿಲ್ಲಾ ಮಟ್ಟದ ಸ್ಪರ್ಧೆಯ ೭ ವಿಭಾಗಗಳಲ್ಲಿ ೧೩ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯ ಶಿಕ್ಷಕ ಜಗದೀಶ ತಿಪ್ಪಿಮನಿ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group