spot_img
spot_img

ಅರಭಾವಿ ಕ್ಷೇತ್ರ ಚುನಾವಣಾ ಸಿದ್ಧತೆಗೆ ಸಜ್ಜಾದ ಉಪವಿಭಾಗಾಧಿಕಾರಿ

Must Read

spot_img
- Advertisement -

ಅಕ್ರಮ ಕಂಡುಬಂದರೆ ಕೂಡಲೆ ತಿಳಿಸಿ

ಮೂಡಲಗಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕುಕ್ಕರ, ಗೃಹಬಳಕೆಯ ವಸ್ತುಗಳು, ಬಾಡೂಟದ ಕೂಪನ್ ಗಳನ್ನು ಮತ್ತು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದರೆ ಕೂಡಲೇ ಚುನಾವಣಾಧಿಕಾರಿಗಳು ಅವುಗಳನ್ನು ಮುಟ್ಟುಗೊಲು ಹಾಕಿಕೊಂಡು ಹಂಚಿಕೆ ಮಾಡಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಎಚ್ಚರಿಕೆ ನೀಡಿದರು.

ಮಂಗಳವಾರದಂದು ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಅರಭಾವಿ ವ್ಯಾಪ್ತಿಯ ಯಾದವಾಡ ಮತ್ತು ಹಳ್ಳೂರ ಗ್ರಾಮಗಳ ಜಿಲ್ಲಾ ಗಡಿಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಪ್ರಾರಂಭಿಸಲಾಗಿದ್ದು, 2023ರ ಸಾರ್ವತ್ರಿಕ ಚುನಾವಣೆ ಉತ್ತಮ ರೀತಿಯಲ್ಲಿ ಜರುಗುವಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

- Advertisement -

ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 281 ಮತಗಟ್ಟೆಗಳಿದ್ದು, 2.39.673 ಮತದಾರರು ಇದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಯಾವುದೇ ತೆರನಾದ ಗೊಂದಲಗಳನ್ನು ಮಾಡಿಕೊಳ್ಳದೇ ಯಶಸ್ವಿ ಮಾಡಲು ಈಗಾಗಲೇ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮತದಾನ ಸಂದರ್ಭದಲ್ಲಿ ಅಂಗವಿಕಲರು ಹಾಗೂ 80 ವಯಸ್ಸು ಇರುವ ಮತದಾರರು ಸ್ವ ಇಚ್ಛೆಯಿಂದ ಮತಗಟ್ಟೆಗಳಿಗೆ ಬಂದು ಮತದಾನ ಮಾಡಬಹುದು ಇಲ್ಲವಾದರೇ ಮನೆಯಿಂದಲೇ ಮತದಾನ ಚಲಾಯಿಸಲು ವ್ಯವಸ್ಥೆ ಮಾಡಲಾಗುವುದು ಆದರಿಂದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಸಾರ್ವತ್ರಿಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು. ಚುನಾವಣೆ ನೀತಿ ಸಂಹಿತೆ ಜಾರಿ ಆಗುವವರೆಗೂ ಬ್ಯಾನರ್‍ಗಳನ್ನು ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳಿಂದ ಪರವಾನಿಗೆ ಪಡೆದು ಬ್ಯಾನರ್‍ಗಳನ್ನು ಅಳವಡಿಸಬೇಕು ಎಂದರು.

ತಹಶೀಲ್ದಾರ ಪ್ರಶಾಂತ ಚನಗೊಂಡ ಮಾತನಾಡಿ, ಅರಭಾವಿ ಮತಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲಗಳು ಇದ್ದರೇ ಅಥವಾ ಚುನಾವಣೆಗೆ ಸಂಬಂಧಿಸಿದ ಸಾರ್ವಜನಿಕರ ದೂರು/ಮಾಹಿತಿಗಾಗಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಸಹಾಯವಾಣಿ ಸಂಖ್ಯೆ 8023900863 ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group