ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

Must Read

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ ಮಂಜೂರು ಮಾಡುವ ಸ್ಪಷ್ಟ ಭರವಸೆ ನೀಡಿದ್ದಾರೆಂದು ಹೇಳಿದರು.

ಸಾರ್ವಜನಿಕರ ಬೇಡಿಕೆಯನುಸಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮೂಡಲಗಿಗೆ ಅಗತ್ಯವಿರುವ ಉಪ ನೋಂದಣಿ ಕಛೇರಿ ಮಂಜೂರಾತಿಗೆ ಮನವಿ ಮಾಡಿಕೊಳ್ಳಲಾಗಿದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬೊಮ್ಮಾಯಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಡತ ಮಂಡಿಸಲು ಸೂಚಿಸಿದ್ದು, ಬರುವ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group