ಮನಗೂಳಿ ನಾಮಪತ್ರ ಸಲ್ಲಿಕೆ; ಗೆಲ್ಲುವ ವಿಶ್ವಾಸ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ತಮ್ಮ ಉಮೇದುವಾರಿಕೆಯನ್ನು ಕೊನೆಯ ದಿನವಾದ ಇಂದು ಸಲ್ಲಿಕೆ ಮಾಡಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಸಚಿವ ಎಂ.ಬಿ.ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ, ಬ್ಲಾಕ್ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳುರ ಭಾಗವಹಿಸಿದ್ದರು.

ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್ ಪಕ್ಷದ ಉದ್ದೇಶ ಏನೇ ಇದ್ದರೂ ಮತದಾರರು ಬುದ್ದಿವಂತರಿದ್ದಾರೆ. ಅವರಿಗೆ ಮತ ಹಾಕುವುದಿಲ್ಲ ಉಪ ಚುನಾವಣೆ ಕಾಂಗ್ರೆಸ್ ಗೆ ಬಯಸದೆ ಬಂದ ಭಾಗ್ಯ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿಸಿದರು.

- Advertisement -

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿವೆ. ಜನರಿಗೆ ಕಣ್ಣೀರಲ್ಲಿ ಕೈತೊಳೆಯುವಂತಹ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಜನರು ಬೇಸತ್ತ ಕಾರಣ, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ಸಾಹ ಅಗಾಧವಾಗಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾತನಾಡಿ, ಈ ಉಪ ಚುನಾವಣೆ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ತಕ್ಕ ಪಾಠ ಕಲಿಸಲು ಬಂದಿದೆ. ಸಿಂದಗಿ ಮತ್ತು ಹಾನಗಲ್ ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ 25 ಸಾವಿರ ಮತಗಳಿಂದ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಂದಗಿ ಕ್ಷೇತ್ರದಲ್ಲಿನ ಜನ ಸಾಗರ ನೋಡಿದರೆ ಏನನ್ನೂ ಹೇಳುವ ಅವಶ್ಯಕತೆ ಇಲ್ಲ ಅನಿಸುತ್ತದೆ.  ಸಮಾಜದ ಎಲ್ಲಾ ವರ್ಗದವರು ಅಭ್ಯರ್ಥಿಯನ್ನು ಒಪ್ಪಿದ್ದಾರೆ ಎಂದು ಹೇಳಿದರು.

ಎಂ.ಸಿ.ಮನಗೂಳಿ ಅವರ ನಿಧನದಿಂದಾಗಿ ಅನಿವಾರ್ಯ ಕಾರಣಕ್ಕೆ ಚುನಾವಣೆ ಎದುರಾಗಿದೆ ಅವರ ನಿಧನರಾಗುವುದಕ್ಕೂ ಮುಂಚೆ ಡಿ.ಕೆ.ಶಿವಕುಮಾರ ಹಾಗೂ ನನ್ನನ್ನು ಭೇಟಿಯಾಗಿ ನನ್ನ ಮಗ ಅಶೋಕನನ್ನು ನಿಮ್ಮ ಪಕ್ಷದಲ್ಲಿ ಬೆಳೆಸಬೇಕು ಎಂದಿದ್ದರು. ಅವರ ಮಾತಿನಂತೆ ಅಶೋಕ ಮನಗೂಳಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಈ ಎಲ್ಲ ಬೆಳವಣಿಗೆಗಳು ನೋಡಿದರೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದರು.


ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!