ಬೆಳಗಾವಿ: ಹಿಂಗಾರು ಹಂಗಾಮಿಗೆ ಅನ್ವಯವಾಗುವಂತೆ ಕೃಷಿ ಬಳಕೆಯ ಫಾಸ್ಟೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ 24,474 ಕೋಟಿ ರೂಪಾಯಿ ಸಬ್ಸಿಡಿಯನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ನಿರ್ಧಾರವು ಸ್ವಾಗತಾರ್ಹವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.
ಗುರುವಾರ ಸೆ-19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರಸಗೊಬ್ಬರ ತಯಾರಕರು/ಆಮದುದಾರರ ಮೂಲಕ ರೈತರಿಗೆ ಪಿ-ಕೆ ರಸಗೊಬ್ಬರದ 28 ಗ್ರೇಡ್ ಗಳನ್ನು ಸಬ್ಸಿಡಿ ದರದಲ್ಲಿ ಒದಗಿಸುವುದು ಇದರ ಉದ್ದೇಶವಾಗಿದ್ದು, ಇದು 2024ರ ಅಕ್ಟೋಬರ್ ನಿಂದ 2025ರ ಮಾರ್ಚ್ ವರೆಗೆ ಅನ್ವಯಿಸುತ್ತದೆ. ಇದು ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ರಸಗೊಬ್ಬರಗಳ ಲಭ್ಯತೆಯನ್ನು ಖಾತ್ರಿಪಡಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು.
ರೈತರಿಗೆ ಉತ್ತಮ ಬೆಲೆ ಒದಗಿಸಲು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಳಿತವನ್ನು ನಿಯಂತ್ರಿಸುವ ಸಲುವಾಗಿ 35,000 ಕೋಟಿ ರು. ವೆಚ್ಚದ ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (ಪಿಎಂ-ಆಶಾ) ಯೋಜನೆಯನ್ನು ಮುಂದುವರೆಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ರೈತರು ಮತ್ತು ಗ್ರಾಹಕರಿಗೆ ಉಪಯೋಗವಾಗುವಂತೆ ಬೆಲೆ ಬೆಂಬಲ ಯೋಜನೆ ಮತ್ತು ಬೆಲೆ ಸ್ಥಿರೀಕರಣ ನಿಧಿಯನ್ನು ಒಗ್ಗೂಡಿಸಲಾಗಿದೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ ನಡ್ಡಾ ಅವರಿಗೆ ನಾಡಿನ ರೈತರ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.