ಬನವಾಸಿಯಲ್ಲಿ ಲಸಿಕಾ ಮೇಳ ಯಶಸ್ವಿ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಬನವಾಸಿ: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗುಡ್ನಾಪೂರ ಉಪ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಕೋವಿಡ್ ಲಸಿಕಾ ಮೇಳ ಜರುಗಿತು.

ಬೆಳಿಗ್ಗೆ 10ಗಂಟೆಗೆ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ಜಯಶ್ರೀ ಹೆಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬನವಾಸಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸಿ ಮುಂಜಾನೆ 8 ಗಂಟೆಯಿಂದ ಕೋವಿಡ್ ಮಾರ್ಗಸೂಚಿಯಂತೆ ಸರತಿ ಸಾಲಿನಲ್ಲಿ ನಿಂತು ಕೋವಿಡ್ ಲಸಿಕೆಯನ್ನು ಪಡೆದುಕೊಂಡರು.

18ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್ ಲಸಿಕೆ ನೀಡುತ್ತಿರುವುದರಿಂದ ಯುವಜನತೆ ಲಸಿಕಾ ಮೇಳಕ್ಕೆ ಉತ್ಸಾಹದಿಂದ ಆಗಮಿಸಿ ಲಸಿಕೆ ಹಾಕಿಸಿಕೊಂಡರು. 45ವರ್ಷ ಮೇಲ್ಪಟ್ಟವರು ಸರತಿ ಸಾಲಿನಲ್ಲಿ ನಿಂತು ಲಸಿಕೆ ಪಡೆದುಕೊಂಡರು.

- Advertisement -

ಸಾರ್ವಜನಿಕರ ಸಹಕಾರದಿಂದ ಲಸಿಕಾ ಮೇಳ ಯಶಸ್ವಿಯಾಗಿ ನಡೆಯುತ್ತಿದೆ. ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 400 ಜನರಿಗೆ ಮತ್ತು ಗುಡ್ನಾಪೂರ ಉಪ ಆರೋಗ್ಯ ಕೇಂದ್ರದಲ್ಲಿ 200 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ವೈದ್ಯಾಧಿಕಾರಿ ಡಾ. ಜಯಶ್ರೀ ಹೆಗಡೆ ಹೇಳಿದರು.

ಕಾರ್ಯಕ್ರಮದಲ್ಲಿ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದವರು ಇದ್ದರು.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!