ಧರ್ಮವಿರೋಧಿಗಳನ್ನು ಬಂಧಿಸಿ -ಹೋರಾಟಕ್ಕೆ ಬೆಂಬಲ

Must Read

ಮುಧೋಳ – ಮುಧೋಳದಲ್ಲಿ ಧಮ೯ವೀರ ಪ್ರತಿಷ್ಠಾನವು‌ ಶನಿವಾರ ದಿ 23 ರಂದು ಹಮ್ಮಿಕೊಂಡಿರುವ “ಧಮ೯ವಿರೋಧಿಗಳನ್ನು ಬಂಧಿಸಿ” ಜಾಥಾ ಕಾರ್ಯಕ್ರಮಕ್ಕೆ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಶರಣಬಸವಶಾಸ್ತ್ರಿಗಳು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ

ಈ ಬಗ್ಗೆ ಅವರು  ಮಾತನಾಡುತ್ತಾ, ಕರ್ನಾಟಕ ರಾಜ್ಯದ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ ಶ್ರೀ ಕ್ಷೇತ್ರವು ಕೋಟ್ಯಂತರ ಭಕ್ತರನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ.ಹಾಗೆ ಧರ್ಮಸ್ಥಳದ ಪೂಜ್ಯರಾದ ವೀರೇಂದ್ರ ಹೆಗ್ಗಡೆಯವರು ಒಬ್ಬ ದೇವತಾ ಮನುಷ್ಯ. ಅಂಥವರ ತೇಜೋವಧೆ ಮಾಡಲು ನೀಚ ಜನ ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಿರುವುದು ಖಂಡನೀಯ. ಇಂತಹ ಕೀಳುಮಟ್ಟದ ಅಭಿರುಚಿಗಳನ್ನು ಹೊಂದಿರುವ ಮತಾಂದರನ್ನು ಮತೀಯವಾದಿಗಳನ್ನು ಸರ್ಕಾರ ಶೀಘ್ರವೆ ಬಂಧಿಸಬೇಕೆಂದು ಒತ್ತಾಯಿಸಿದರು

ಅವರು ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳ ಮುಖಂಡರು ಶನಿವಾರ ದಿ.23 ರಂದು ಮಧ್ಯಾಹ್ನ 12 ಗಂಟೆಗೆ ನಡೆಯುವ ಜಾಥಾದಲ್ಲಿ ಭಾಗವಹಿಸಲು ತಿಳಿಸಿದ್ದಾರೆ .

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group