spot_img
spot_img

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Must Read

spot_img

ಬೈಲಹೊಂಗಲ: ದುಶ್ಚಟಗಳಿಂದ ದೂರವಿರುವ ದೃಢ ಸಂಕಲ್ಪ ಮಾಡಿದರೆ ಬದುಕು ಸ್ವಾಸ್ಥ್ಯದಿಂದ ಕೂಡಿರುತ್ತದೆ ಎಂದು ಬೆಳಗಾವಿ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ವಿಠ್ಠಲ ಪಿಸೆ ಹೇಳಿದರು.

ಬೈಲಹೊಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ ಹಾಗೂ ಬೆಳಗಾವಿಯ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಬಾಲ್ಯ ಮತ್ತು ಯೌವನಾವಸ್ಥೆಯಲ್ಲಿ ಮಕ್ಕಳು ಯಾವುದೇ ಕಾರಣಕ್ಕೂ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬಾರದು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜೀವನದಲ್ಲಿನ ಘಟನೆಗಳನ್ನು ವಿವರಿಸುವುದರ ಮೂಲಕ ಮಕ್ಕಳಿಗೆ ಅನೇಕ ಮಾಹಿತಿಗಳನ್ನು ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರಿಂದ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದರು. ಸದಾ ಉಪಯುಕ್ತ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಯಾವುದೇ ದುಶ್ಚಟಗಳು ಹತ್ತಿರ ಬರಲಾರವು. ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯದಿಂದ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು. ನಿತ್ಯ ನಿರಂತರವಾಗಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಧರ್ಮಸ್ಥಳ ಟ್ರಸ್ಟಿನ ಕಾರ್ಯ ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ದುಶ್ಚಟಗಳನ್ನು ಮಾಡದಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ರಮೇಶ ಸೂರ್ಯವಂಶಿ, ಗ್ರಾಮದ ಹಿರಿಯರಾದ ಪಾಂಡುರಂಗ ಹೊಸೂರ, ಗ್ರಾಮ ಪಂಚಾಯತಿ ಸದಸ್ಯರಾದ ರಾಜಶೇಖರ ದೊಡವಾಡ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶ್ರೀಪಾಲ ಚೌಗಲಾ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ, ರೇಖಾ ಸೊರಟೂರ, ಅಡುಗೆ ಸಹಾಯಕರಾದ ಗಂಗವ್ವ ಅಳಗೋಡಿ, ಮಹಾದೇವಿ ಸೊಗಲದ, ಶ್ರೀಕ್ಷೇತ್ರ ಧರ್ಮಸ್ಥಳ ಟ್ರಸ್ಟಿನ ಸೇವಾ ಪ್ರತಿನಿಧಿಗಳಾದ ಶಂಕರ ಹುಂಬಿ, ಸವಿತಾ ಚಚಡಿ, ಒಕ್ಕೂಟದ ಅಧ್ಯಕ್ಷರಾದ ಸುಜಾತಾ ಚಿಕ್ಕಮಠ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಐಶ್ವರ್ಯ ಕುಲಕರ್ಣಿ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕರಾದ ನಿಂಗಪ್ಪ ಪಾಟೀಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!