ಮೂಡಲಗಿ – ಬೆಳಗಾವಿ ಜಿಲ್ಲೆಯ ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ (ಬಿ. ಎಸ್. ಡಬ್ಲೂ) ಮೂರನೆಯ ಸೆಮಿಸ್ಠರ್ ವಿದ್ಯಾರ್ಥಿಯಾದ ತಾಹೀರ ಹುಸೇನ ಅವರು ೧೦೦ ಮೀಟರ್ ವಿಭಾಗದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಥ್ಲೆಟಿಕ್ಸ್ ತಂಡಕ್ಕೆ (ಯೂನಿವರ್ಸಿಟಿ ಬ್ಲೂ) ಆಯ್ಕೆಯಾಗುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.
ಇವರು ೧೦೦ ಮೀಟರ್ ಓಟವನ್ನು ಕೇವಲ ೧೦.೮೫ ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ಈ ಸಾಧನೆಯನ್ನು ಮಾಡಿರುತ್ತಾರೆ. ಇವರ ಈ ಸಾಧನೆಗೆ ಮಹಾವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಸರ್ವ ಸದಸ್ಯರು, ಪ್ರಾಂಶುಪಾಲರಾದ ಮಹೇಶ ಕಂಬಾರ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಕೋರಿರುತ್ತಾರೆ.

