ಮೂಡಲಗಿ- ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮೂಡಲಗಿ ತಹಶೀಲ್ದಾರ ಶ್ರೀಶೈಲ ಗುಡಮೆ ಅವರಿಗೆ ಸೋಮವಾರದಂದು ಧರ್ಮಸ್ಥಳದ ನೂರಾರು ಭಕ್ತಾಭಿಮಾನಿಗಳು ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವೂ ಒಂದು. ಸರಿ ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಕ್ಷೇತ್ರ ‘ದಕ್ಷಿಣ ಕಾಶಿ’ ಎಂದೇ ನಾಮಾಂಕಿತವಾಗಿದೆ. ರಾಜ್ಯದಲ್ಲಷ್ಟೇ ಅಲ್ಲದೇ ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹೀಗೆ ದೇಶದ ಬೇರೆ ಬೇರೆ ಕಡೆಗಳಿಂದ ನಿತ್ಯ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಸುಮಾರು 50 ಸಾವಿರದಿಂದ 1 ಲಕ್ಷ ಮಂದಿ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಕಳೆದ ಕೆಲವು ವರ್ಷಗಳಿಂದ ಗಿರೀಶ ಮಟ್ಟಣ್ಣನವರ್, ಮಹೇಶ ಶೆಟ್ಟಿ ತಿಮರೋಡಿ, ಸಮೀರ್ ಎಮ್.ಡಿ , ಸಂತೋಷ್ ಶೆಟ್ಟಿ, ಜಯಂತ್ ಟಿ., ಅಜಯ ಅಂಚನ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಪೂಜ್ಯನೀಯ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂಹತ ಕೀಳು ಮಟ್ಟದ ಭಾಷೆಯನ್ನು ಉಪಯೋಗಿಸಿ ವಿಡಿಯೋಗಳ ತುಣುಕುಗಳನ್ನು ತಯಾರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೇ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ‍್ರೀ ಕ್ಷೇತ್ರದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಉದ್ವಿಗ್ನತೆ ಮತ್ತು ಶಾಂತಿ ಭಂಗಕ್ಕೆ ಕಾರಣವಾಗಬಹುದಾಗಿದೆ. ಅನಾಮಿಕ ವ್ಯಕ್ತಿಯೋರ್ವ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರ್ಕಾರವು ‘ವಿಶೇಷ ತನಿಖಾ ತಂಡ’ ವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಶ್ರೀ ಕ್ಷೇತ್ರದ ಭಕ್ತ ವೃಂದದವರಾದ ನಾವೆಲ್ಲರೂ ಗೌರವದಿಂದ ಸ್ವಾಗತಿಸುತ್ತೇವೆ. ಆದರೆ ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂ-ಟ್ಯೂಬ್, ಫೇಸಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಭಕ್ತರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ.
ಕು. ಸೌಜನ್ಯಾಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ದಾಳಿಗೆ ಹೊರಟ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಮ್.ಡಿ , ಸಂತೋಷ್ ಶೆಟ್ಟಿ, ಜಯಂತ್ ಟಿ., ಅಜಯ್ ಅಂಚನ್ ಇವರುಗಳು ಷಢ್ಯಂತ್ರ ಹಾಗೂ ಅಪಪ್ರಚಾರ ಮಾಡುತ್ತಿರುವುದರ ಹಿನ್ನೆಲೆ ಏನು?, ಸುಳ್ಳು ಆರೋಪ ಮಾಡಲು ಪ್ರಚೋದಿಸುತ್ತಿರುವವರು ಯಾರು? ಈ ತಂಡಕ್ಕೆ ಹಣಕಾಸಿನ ನೆರವು ಎಲ್ಲಿಂದ ಬರುತ್ತಿದೆ? ಎಂಬುದನ್ನು ತಿಳಿಯಲು ಸೂಕ್ತ ತನಿಖೆ ನಡೆಸಬೇಕಾಗಿದೆ. ತಮ್ಮ ಮೊಬೈಲ್ ನಲ್ಲಿ ಸಾಕ್ಷಿಗಳಿವೆ ಎಂದು ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಘಂಟಾಘೋಷವಾಗಿ ಭಾಷಣ ಮಾಡುತ್ತಿರುವ ಇವರುಗಳನ್ನು ವಿಚಾರಣೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಬಯಲಿಗೆ ಎಳೆಯಬೇಕಾಗಿದೆ. ಈ ನಿಟ್ಟಿನಲ್ಲಿ ಈಗಿರುವ ಎಸ್.ಐ.ಟಿ ತಂಡ ಅಥವಾ ಇನ್ನೊಂದು ತನಿಖಾ ತಂಡವನ್ನು ರಚಿಸಿ ತಕ್ಷಣ ತನಿಖೆಯನ್ನು ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾದ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತವೃಂದದವರು ಕ್ಷೇತ್ರದ ರಕ್ಷಣೆಗೆ ನಾವು ಸದಾ ಸಿದ್ಧರಿದ್ದೇವೆ. ನಾವು ನೀಡಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬುವುದು ನಮ್ಮ ಆಗ್ರಹವಾಗಿದೆ ಎಂದುಮನವಿ ಮಾಡಿಕೊಂಡಿದ್ದಾರೆ.
ಈ ಸಮಯದಲ್ಲಿ ಮಾತೋಶ್ರೀ ಕಾವ್ಯಾ ಶ್ರೀ ಅಮ್ಮನವರು, ಮುಖಂಡ ಬರಮಣ್ಣ ಉಪ್ಪಾರ, ಶ್ರೀಶೈಲ ಡವಳೇಶ್ವರ, ಅಂದಾನಿ ಅನಂತಪುರ, ಶಿವಾನಂದ ಗೊಟುರ, ಸಿದ್ಧಪ್ಪ ದಡ್ಡಿ, ಶಿವಪ್ಪ ಮದಿಹಳ್ಳಿ, ಜೇ ಕೆ.ಬಸವರಾಜ ಗೌರಾಣಿ, ಶಿವಾನಂದ ರಡರಟ್ಟಿ, ಭರಮಪ್ಪ ಕೇರಿ, ರಮೇಶ ಆಟಮಟ್ಟಿ, ಸುರೇಶ ಪೂಜೇರಿ, ದಯಾನಂದ ಸುಣದೋಳಿ, ಮಲಕಾರಿ ಮುತ್ತೆನ್ನವರ, ಕಲ್ಲಪ್ಪ ವಡೆರಹಟ್ಟಿ, ಭೀಮಶಿ ಸವಸುದ್ಧಿ, ನಿಂಗಪ್ಪ ಮುತ್ನಾಳ, ಮಂಜು ಬೆಟಗೇರಿ, ಕೆಂಪಣ್ಣ ರುದ್ರಾಪುರ, ರಾಮಸ್ವಾಮಿ ಸೈದಾಪುರ, ಸುನಂದಾ ಬಜೆಂತ್ರಿ, ಸುಪ್ರಿತ ಕಾಳೆ, ನಾಗಪ್ಪ ಸಿಳನವರ, ಸಿದ್ಧಪ್ಪ ದಾನಪ್ಪಗೋಳ, ಅಜಯ ಬಜೆಂತ್ರಿ, ಭೀಮಶಿ ಬಜೆಂತ್ರಿ, ಲಕ್ಕಪ್ಪ ಹೋಲ್ಕರ, ಸುರೇಶ ಬಳಿಗಾರ, ಮುತ್ತಪ್ಪ ಮುತ್ತೆನ್ನವರ, ಹನಮಂತ ದ್ಯಾಪರಟ್ಟಿ, ಮಹಾದೇವ ಗೋಲಬಾಂವಿ, ರಾಜು ಸಾತನ್ನವರ ಸೇರಿದಂತೆ ಅನೇಕರಿದ್ದರು.