ಶೈಕ್ಷಣಿಕ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ- ಕಾಶಪ್ಪನವರ

Must Read

ಹುನಗುಂದ: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಏಕಾಗ್ರತೆ, ಸತತ ಅಧ್ಯಯನದಿಂದ ನಾವಿಟ್ಟುಕೊಂಡ ಗುರಿಯನ್ನು ಮುಟ್ಟಲು ಸಾಧ್ಯ. ಸರ್ಕಾರ ಶಿಕ್ಷಣಕ್ಕಾಗಿ ಅನೇಕ ಸೌಲಭ್ಯಗಳನ್ನು ಒದಗಿಸಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಶಾಸಕ ವಿಜಯಾನಂದ ಕಾಶಪ್ಪನವರ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದ್ವಿತೀಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್.ಆರ್.ಕೆ.ದತ್ತಿ ಪುರಸ್ಕಾರ, ನೂತನ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜಿನ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೂರು ತಲೆಮಾರಿನಿಂದ ಶಿಕ್ಷಣ ಸೇರಿದಂತೆ ಜನಹಿತ ಕಾರ್ಯಗಳಿಗೆ ನಮ್ಮ ಕುಟುಂಬ ನಿರಂತರ ಶ್ರಮಿಸಿದೆ. ಈ ಮತಕ್ಷೇತ್ರದ ಜನಸೇವೆ ಮಾಡುವ ಕಾರ್ಯಕ್ಕೆ ನಾನು ಬದ್ಧನಿದ್ದು ಅದಕ್ಕೆ ಜನಾಶೀರ್ವಾದವೇ ಸಾಕ್ಷಿ. ಪ್ರಾಥಮಿಕ ಹಂತದಿಂದ ಪದವಿವರೆಗೆ ಒಂದೇ ಆವರಣದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು ಮುಂಬರುವ ದಿನಗಳಲ್ಲಿ ಹುನಗುಂದ ಹಾಗೂ ಇಲಕಲ್ ನಗರಗಳಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆರಂಭಿಸಲಾಗುವದೆಂದರು.
ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಉಪಾಧ್ಯಕ್ಷೆ ರಾಜಮ್ಮ ಬದಾಮಿ, ಉದ್ಯಮಿ ಶಾಂತಣ್ಣ ಸುರಪುರ, ಪದವಿ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ, ದತ್ತಿ ಪುರಸ್ಕಾರದ ದಾನಿ ಎಸ್ಕೆ.ಕೊನೆಸಾಗರ, ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಪಿಯು ಕಾಲೇಜು ಸಿಡಿಸಿ ಸದಸ್ಯರು, ಆದರ್ಶ ವಿದ್ಯಾಲಯದ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಬಸರಾಜ ರಕ್ಕಸಗಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಶಾಂತಾ ಸಂಗಮ ಪ್ರಾರ್ಥಿಸಿದರು. ಪ್ರಾಚಾರ್ಯ ಶರಣಪ್ಪ ಹೂಲಗೇರಿ ಸ್ವಾಗತಿಸಿದರು. ವಿ.ಕೆ.ಶಶಿಮಠ ವಂದಿಸಿದರು. ಡಾ.ಎನ್.ವಾಯ್.ನದಾಫ ನಿರೂಪಿಸಿದರು.

Latest News

ರೈತರು ಸಾವಯವ ಕೃಷಿ ಮಾಡಿ ಭೂಮಿಯ ಫಲವತ್ತತೆ ಕಾಯಬೇಕು – ಸಹದೇವ ಯರಗೊಪ್ಪ

ಮೂಡಲಗಿ: ’ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿ ಮಾಡುವ ಮೂಲಕ ಭೂಮಿಯ ಫಲವತ್ತತೆಯನ್ನು ವೃದ್ಧಿಸುವ ಜೊತೆಗೆ ಸಮಾಜದ ಆರೋಗ್ಯವನ್ನು ಕಾಯುವುದು ಅವಶ್ಯವಿದೆ’ ಎಂದು ಚಿಕ್ಕೋಡಿ ಉಪ...

More Articles Like This

error: Content is protected !!
Join WhatsApp Group