spot_img
spot_img

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.20 ರಂದು

Must Read

- Advertisement -

ಮೂಡಲಗಿ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆ.20ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಯುವ ಸಂಘಟಕ ಸಿದ್ದಣ್ಣ ದುರದುಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಪರ್ಧೆಗಳ ವಿವರ : ಅಥ್ಲೆಟಿಕ್ಸ್ (ಪುಷರಿಗಾಗಿ) : 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ, 10,000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ , 110ಮೀ ಹರ್ಡಲ್ಸ್, 4×100 ರಿಲೇ, 4 x400 ರಿಲೇ. ಅಥ್ಲೆಟಿಕ್ಸ್ (ಮಹಿಳೆಯರಿಗಾಗಿ) : 100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ , 100ಮೀ ಹರ್ಡಲ್ಸ್, 4 x 100 ರಿಲೇ, 4 x 400 ರಿಲೇ. ಗುಂಪು ಆಟಗಳು : ವಾಲಿಬಾಲ್, ಪುಟ ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗ (ಪುರುಷ ಮತ್ತು ಮಹಿಳೆಯರಿಗಾಗಿ).

ನಿಯಮಗಳು: ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಮೂಡಲಗಿ ತಾಲೂಕಿನ ರಹವಾಸಿಯಾಗಿರಬೇಕು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಈ ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ/ತಿ ಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸತಕ್ಕದ್ದಲ್ಲ. ಒಂದು ವೇಳೆ ಭಾಗವಹಿಸಿದ್ದಲ್ಲಿ ಅಂತವರ ಆಯ್ಕೆಯನ್ನು ರದ್ದುಗೊಳಿಸಲಾಗುವುದು. ಗುಂಪು ಸ್ಪರ್ಧೆಗಳಲ್ಲಿ ಸಂಪೂರ್ಣ ತಂಡವನ್ನು ರದ್ದುಗೊಳಿಸಲಾಗುವುದು. ನಿರ್ಣಾಯಕರ ನಿರ್ಣಯವೇ ಅಂತಿಮವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಆಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು. ಭಾಗವಹಿಸುವ ಕ್ರೀಡಾಪಟುಗಳಿಗೆ ಇಲಾಖೆಯ ವತಿಯಿಂದ ಯಾವುದೇ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ನೀಡಲಾಗುವುದಿಲ್ಲ.

- Advertisement -

ಹೆಚ್ಚಿನ ಮಾಹಿತಿಗಾಗಿ ಜೂಡೋ ತರಬೇತಿದಾರ ರೋಹಿಣಿ ಪಾಟೀಲ ಮೋ, 8618169003ಗೆ ಅಥವಾ 8618851121 ಸಂಪರ್ಕಿಸಬಹುದಾಗಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group