spot_img
spot_img

ಹೆಣ್ಣು ಮಕ್ಕಳಿಗೆ ಬೇಗ ವಿವಾಹ ಬೇಡ, ಶಿಕ್ಷಣ ಕೊಡಿಸಿ – ಡಾ.ಉಮಾ ಸಾಲಿಗೌಡ್ರ

Must Read

spot_img

ಮೂಡಲಗಿ: ಪ್ರತಿಯೊಬ್ಬರು ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರಯತ್ನಿಸಬೇಕು. ಹೆಣ್ಣು ಮಕ್ಕಳಿಗೆ ಬೇಗ ವಿವಾಹ ಬೇಡ, ಉನ್ನತ ಶಿಕ್ಷಣ ಕೊಡಿಸಲು ಇಂದು ಪ್ರತಿಯೊಬ್ಬ ತಂದೆ, ತಾಯಿ ಪ್ರಯತ್ನಿಸಬೇಕು. ಎಲ್ಲಾ ರಂಗದಲ್ಲಿ ಪುರುಷ ಪ್ರಧಾನಕ್ಕೆ ಸ್ತ್ರೀ ಸಮಾನಳಾಗಿದ್ದಾಳೆ ಎಂದು ಬೆಳಗಾವಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡ್ರ ಹೇಳಿದರು.

ಸಮೀಪದ ಬೆಟಗೇರಿ ಗ್ರಾಮದ ವಿವಿಧ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ಮಾ.24ರಂದು ನಡೆದ ಮಾತೆಯರ ಸಮಾಗಮ ಬಾಲ್ಯ ವಿವಾಹ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಮಹಿಳೆ ಯಾವಾಗಲೂ ಅಬಲೆ ಅಲ್ಲ, ಸಬಲೆಯಾಗಿದ್ದಾಳೆ ಎಂದು ಹೆಣ್ಣು ಮಕ್ಕಳ ಶಿಕ್ಷಣ, ಸಾಮಾಜಿಕ ಸ್ಥಾನಮಾನ, ಸಾಧನೆ, ಬದುಕು-ಬರಹದ ಕುರಿತು ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯ ರಮೇಶ ಅಳಗುಂಡಿ ಅಧ್ಯಕ್ಷತೆ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ, ಗೋಕಾಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಎಸ್.ಎಚ್.ದೇಸಾಯಿ ಅತಿಥಿಗಳಾಗಿ ಮಾತನಾಡಿದರು. ಅತಿಥಿಗಳು, ಸಾಧನೆಗೈದ ಹೆಣ್ಣು ಮಕ್ಕಳನ್ನು ಶಾಲೆಯ ಪರವಾಗಿ ಸತ್ಕರಿಸಲಾಯಿತು.
ಮಲ್ಲಿಕಾರ್ಜುನ ಹಿರೇಮಠ, ಮೋಹನ ತುಪ್ಪದ, ಎ.ಬಿ.ತಾಂವಶಿ, ಲಲಿತಾ ಪಟಗಾರ, ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ತಾಯಂದಿರು, ಪಾಲಕರು, ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಇತರರು ಇದ್ದರು.

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!