ಸವದತ್ತಿ: ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸಾಹಿತಿ ವೈ. ಬಿ. ಕಡಕೋಳರಿಗೆ ಸಿದ್ಧೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಲಬುರಗಿ ಯ ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆಯವರು ಕಲಬುರ್ಗಿಯ ದರ್ಶನಾಪುರ ರಂಗಮಂದಿರದಲ್ಲಿ (ಕನ್ನಡ ಭವನದಲ್ಲಿ) ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶರಣರ ನಾಡಿನಲ್ಲಿ ಸಾಹಿತ್ಯ ಸಂಭ್ರಮ ಎಂಬ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ವೈ. ಬಿ. ಕಡಕೋಳ ರಿಗೆ ಸಿದ್ದೇಶ್ವರ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮೈಂದರಗಿ ಗುರು ಹಿರೇಮಠ ದ ಪರಮಪೂಜ್ಯ ಮೃತ್ಯುಂಜಯ ಸ್ವಾಮಿಗಳು, ನಾಡಿನ ಹೆಸರಾಂತ ಸಾಹಿತಿಗಳು ಹಾಗೂ ಸಮ್ಮೇಳನದ ಅಧ್ಯಕ್ಷರಾದ ಸಿದ್ದರಾಮ ಹೊನ್ಕಲ್, ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಗದೀಶ ಕಬಾನೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ರಾದ ನಂದಿನಿ ಸನಬಾಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ್ ಬಡಿಗೇರ, ಭಾವಸಂಗಮದ ಸಂಸ್ಥಾಪಕ ಅಧ್ಯಕ್ಷ ರಾದ ರಾಜೆಂದ್ರ ಪಾಟೀಲ, ವೀರ ರಾಣಿ ಕಿತ್ತೂರು ಚನ್ಮಮ್ಮ ಪ್ರಶಸ್ತಿ ಪುರಸ್ಕೃತರಾದ ಅನ್ನಪೂರ್ಣ ಸಂಗೊಳ್ಳಿ, ಜೂನಿಯರ ವಿಷ್ಣುವರ್ಧನ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ನೌಕರರ ರಾಜ್ಯ ಸಂಘದ ರಾಜ್ಯಾಧ್ಯಕ್ಷ ರಾದ ಮಹೇಶ್ ಹುಬ್ಬಳ್ಳಿ ಸೇರಿದಂತೆ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು.