spot_img
spot_img

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

Must Read

- Advertisement -

ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ತ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು.

- Advertisement -

ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ ಸರ್ವತೋಮುಖ ಏಳ್ಗೆಗಾಗಿ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ. ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯವಿದ್ದು, ಶಿಕ್ಷಕ ಸಮುದಾಯ ಈ ದಿಸೆಯಲ್ಲಿ ಮಕ್ಕಳಿಗೆ ಉತ್ತಮ ಸನ್ಮಾರ್ಗವನ್ನು ತೋರಿಸುವಂತೆ ತಿಳಿಸಿದರು.

ಕೋವಿಡ್ ಕಾರಣದಿಂದಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅತೀ ಸರಳವಾಗಿ ಆಚರಿಸಲು ಸರ್ಕಾರ ನಿರ್ದೇಶನ ನೀಡಿದೆ. ಕಾರ್ಯ ನಿಮಿತ್ತವಾಗಿ ಬೆಂಗಳೂರಿನಲ್ಲಿದ್ದು, ಸಮಸ್ತ ಶಿಕ್ಷಕ ಬಳಗಕ್ಕೆ ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅವರು, ಸೇವೆಯಿಂದ ನಿವೃತ್ತಗೊಂಡ ಶಿಕ್ಷಕರ ಜೀವನವು ಸುಖಕರದಿಂದ ಕೂಡಿರಲಿ ಎಂದು ಆಶಿಸಿದರು. ಡಾ. ರಾಧಾಕೃಷ್ಣನ್ ಭಾರತ ಕಂಡ ಅಗ್ರಗಣ್ಯ ಶಿಕ್ಷಕರಾಗಿ, ತತ್ವಜ್ಞಾನಿಯಾಗಿ ಅನನ್ಯ ಸೇವೆ ಸಲ್ಲಿಸಿದ್ದರು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುಣಗಾನ ಮಾಡಿದರು.

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group