ಶಿಕ್ಷಕರ ಸಹಕಾರಿ ಬಳಗ ಹತ್ತಿಮತ್ತೂರು

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಒಂದು ಆದರ್ಶ ಗ್ರಾಮ. ಸುಮಾರು ವರ್ಷಗಳ ಇತಿಹಾಸ ಇರುವ ಊರು. ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಗಮ.ಈ ಊರಿನ ಪ್ರಮುಖ ಆಕರ್ಷಣೆ  ಎಂದರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಗೆ ನೂರೈವತ್ತು ವಸಂತಗಳು(12-12-1865).ಈ ಶಾಲೆಯಲ್ಲಿ ಅಧ್ಯಯನ ಮಾಡಿ ಸರ್ಕಾರದ ಎಲ್ಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

24X7 ಶಾಲೆ

ಈ ಶಾಲೆಯಲ್ಲಿ ವಿದ್ಯಾರ್ಥಿಗಳು ಹಗಲು ರಾತ್ರಿ ಅಧ್ಯಯನ ಮಾಡುತ್ತಾರೆ. ಹಗಲು ವೇಳೆಯಲ್ಲಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ. ಇನ್ನೂ ರಾತ್ರಿ ವೇಳೆಯಲ್ಲಿ ಇದೇ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಪ್ರೌಢಶಾಲಾ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ರಾತ್ರಿಯಿಡೀ ಅಧ್ಯಯನ ಮಾಡುತ್ತಾರೆ.

- Advertisement -

ಇವರಿಗೆ ಇದೇ ಶಾಲೆಯ ಶಿಕ್ಷಕರು ಮಾರ್ಗದರ್ಶನ ಮಾಡುತ್ತಾರೆ. ಜೊತೆಗೆ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಂತದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ.

ಶಿಕ್ಷಕರು ಮತ್ತು ಸಮುದಾಯ

ಇಲ್ಲಿನ ಶಿಕ್ಷಕರು ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವರು. ಊರಿನ ಪ್ರಮುಖ ಕಾರ್ಯಕ್ರಮಗಳನ್ನು ಮೇಲ್ವಿಚಾರಣೆ ಮಾಡುವ ಮೂಲಕ ಸಾಮಾಜಿಕ ಮೌಲ್ಯವನ್ನು ಬೆಳೆಸಿಕೊಂಡಿರುತ್ತಾರೆ. ದೇಶದ ಬೆನ್ನೆಲುಬು ರೈತ ಸಂಘದ ಅನೇಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಬಂದಿದ್ದಾರೆ.

ಮಕ್ಕಳ ದತ್ತು

ಈ ಶಾಲೆಯ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ ಮಕ್ಕಳ ದತ್ತು ತೆಗೆದುಕೊಳ್ಳುವುದು. ಹೌದು ಈ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಮತ್ತು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದು, ಪವಿತ್ರ ಶಿಕ್ಷಕ ವೃತ್ತಿಯನ್ನು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನಿರ್ವಹಿಸುವ ಎಲ್ಲ ಶಿಕ್ಷಕರು, ಇದೇ ಊರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ರುದ್ರಮುನೀಶ್ವರ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಅಧ್ಯಯನ ಮಾಡುವ,ಐದನೇ ತರಗತಿ ಮುಗಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರದ ಕಡು ಬಡತನದ ಮಕ್ಕಳನ್ನು ದತ್ತು ತೆಗೆದುಕೊಳ್ಳುತ್ತಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 08 ಮಕ್ಕಳು,ಶ್ರೀ ರುದ್ರಮುನೀಶ್ವರ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ. 04 ಮಕ್ಕಳನ್ನು ದತ್ತು ತೆಗೆದುಕೊಂಡು ಈ ಹನ್ನೆರಡು ಮಕ್ಕಳಿಗೆ ಐದನೆಯ ತರಗತಿಯಿಂದ ಹತ್ತನೆಯ ತರಗತಿಯವರೆಗೆ ದತ್ತು ತೆಗೆದುಕೊಳ್ಳುವ ಮೂಲಕ ಶಿಕ್ಷಕರು ಹೀಗೂ ಕಾರ್ಯ ನಿರ್ವಹಿಸಬಹುದು ಎಂಬುದನ್ನು ತೋರಿಸಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಈ ಯಶಸ್ವಿ ಕಾರ್ಯಕ್ಕೆ ಇಲಾಖೆಯ ಮೇಲಾಧಿಕಾರಿಗಳು ತುಂಬ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪ್ರತಿಭಾ ಪುರಸ್ಕಾರ

ಈ ಬಳಗದಲ್ಲಿ ಇರುವ ಶಿಕ್ಷಕರು ಸಾಧಕರೂ ಆಗಿರುತ್ತಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ತಾಲ್ಲೂಕು ಮಟ್ಟದಿಂದ ಅಂತಾರಾಷ್ಟ್ರೀಯ ಮಟ್ಟದವರೆಗೆ ಸಾಧನೆ ಮಾಡುವ ಪ್ರತಿಯೊಬ್ಬ ಸಾಧಕ ಶಿಕ್ಷಕರನ್ನು ಪ್ರತಿವರ್ಷ ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸಾಮಾನ್ಯ ಸದಸ್ಯರ ಸಭೆಯಲ್ಲಿ ಸನ್ಮಾನಿಸಿ ಗೌರವಿಸುವ ಮೂಲಕ ಶಿಕ್ಷಕ ಪ್ರತಿಭೆಗಳನ್ನು ನಾಡಿಗೆ ಗುರುತಿಸುವ ಕಾರ್ಯ ನಿರ್ವಹಿಸುತ್ತಿದೆ.

70 ವಸಂತಗಳನ್ನು ಪೂರೈಸಿದ ಹಿರಿಯರಿಗೆ ಗೌರವ

ಈ ಬಳಗದಲ್ಲಿರುವ 70 ವಸಂತಗಳನ್ನು ಪೂರೈಸಿದ ಹಿರಿಯ ಸದಸ್ಯರುಗಳನ್ನು ಪ್ರತಿವರ್ಷ ವಾರ್ಷಿಕ ಮಹಾ ಸಭೆಯಲ್ಲಿ ಗೌರವಿಸಲಾಗುತ್ತದೆ.

ಬಳಗಕ್ಕೆ ಸೈನ್ಯದ ಶಿಸ್ತು

ಈ ಶಿಕ್ಷಕರ ಬಳಗವು ದಿನಾಂಕ : 05-09 – 2003. ರಂದು ಸ್ಥಾಪನೆಯಾಯಿತು. ಈ ಬಳಗದ ಅಧ್ಯಕ್ಷತೆಯನ್ನು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದು ದೇಶ ಸೇವೆಗೆ ತಮ್ಮ ಸೇವೆಯನ್ನು ಸಲ್ಲಿಸಿ ,ಪುನಃ ಇದೇ ಶಾಲೆಯಲ್ಲಿ ತಮ್ಮ ವೃತ್ತಿ ಬದುಕನ್ನು ನಿರ್ವಹಿಸಿ ನಿವೃತ್ತಿ ಹೊಂದಿ ವಿಶ್ರಾಂತ ಜೀವನ ನಡೆಸುತ್ತಿರುವ, ಶ್ರೀ ಬಿ.ಕೆ.ತಾಯಮ್ಮನವರರವರು ಅಂದಿನಿಂದ ಇಂದಿನವರೆಗೂ ಅವರೇ ಅಧ್ಯಕ್ಷರಾಗಿದ್ದು, ಅವರ ಕಾರ್ಯ ನಿಷ್ಠೆ ಮತ್ತು ಕರ್ತವ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಕಾರ್ಯದರ್ಶಿಗಳಾದವರು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದ ಮತ್ತೊಬ್ಬ ಸಿ ಆರ್ ಪಿ ಎಫ್ ಯೋಧರು ಶ್ರೀ ಎಸ್ ಡಿ ಅರಳಿಹಳ್ಳಿ ಅವರು ಕೂಡ ಅಧ್ಯಕ್ಷರ ಜೊತೆಗೆ ಕೈಜೋಡಿಸಿ ಕರ್ತವ್ಯವನ್ನು ನಿರ್ವಹಿಸುತ್ತಾರೆ. ಕಳೆದ ಒಂದೆರಡು ವರ್ಷಗಳ ಹಿಂದೆ ಈ ಬಳಗದ ವಹಿವಾಟು ತುಂಬ ಹೆಚ್ಚಾಗಿದ್ದುದರಿಂದ ಸಹ ಕಾರ್ಯದರ್ಶಿಯಾಗಿ ಶಿಕ್ಷಕ ಶ್ರೀ ಎನ್ ಎನ್ ಮಾಸಣಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

ಸುಲಭ ಕಂತುಗಳಲ್ಲಿ ಸಾಲ

ಈ ಬಳಗದಲ್ಲಿ ಸಹಕಾರ ತತ್ವದಡಿ ಒಂದು ಬಳಗ ಮಾಡಿಕೊಂಡಿದ್ದು. ಈ ಬಳಗದ ಸದಸ್ಯರು ಪ್ರತಿ ತಿಂಗಳು 200 ರೂಪಾಯಿಗಳ ಶೇರು ಹಣವನ್ನು ಪ್ರತಿ ತಿಂಗಳು ಎರಡನೇ ಶನಿವಾರದಂದು ಪಾವತಿಸುತ್ತಾರೆ.

ಅಂದೇ ಸಾಲಕ್ಕೆ ಅರ್ಜಿ ಸಲ್ಲಿಸಿದ ಶಿಕ್ಷಕ ಬಂಧುಗಳಿಗೆ ಎರಡು ಲಕ್ಷ ರೂಪಾಯಿಗಳ ಸಾಲವನ್ನು ಪಡೆಯುವ ಸೌಲಭ್ಯವನ್ನು ಈ ಬಳಗದ ಸದಸ್ಯರಿಗೆ ಮಾತ್ರ ನೀಡುತ್ತಾರೆ.ಮತ್ತೆ ಸುಲಭ ಕಂತುಗಳಲ್ಲಿ ಮರುಪಾವತಿ ಮಾಡುತ್ತಾರೆ.ಪ್ರತಿವರ್ಷ ಇದನ್ನು ವಾರ್ಷಿಕ ಲೆಕ್ಕಪತ್ರ ತಪಾಸಣೆ ಮಾಡಲಾಗುತ್ತದೆ. ಇದರಲ್ಲಿ ಈ ಬಳಗವು (A) “ಅ” ವರ್ಗವನ್ನು ಪಡೆದುಕೊಳ್ಳುತ್ತ ಬಂದಿದೆ.ಸಹಕಾರಿ ಸಂಘಗಳ ಅಧಿನಿಯಮದ ಪ್ರಕಾರ ಇಲ್ಲಿ ಕೆಲಸ ನೆರವೇರುತ್ತದೆ.

ಅಧಿಕೃತ ಕಟ್ಟಡ ಇಲ್ಲದ ಬಳಗ

ಈ ಬಳಗಕ್ಕೆ ಪ್ರತಿ ತಿಂಗಳು ಹಾಗೂ ವಾರ್ಷಿಕ ಮಹಾಸಭೆಯನ್ನು ನಡೆಸಲು ಸ್ವಂತ ಕಟ್ಟಡ ಇಲ್ಲ. ಹಾಗಾಗಿ ಬಳಗದ ಕಾರ್ಯ ವೈಖರಿಯನ್ನು ಮೆಚ್ಚಿ ತಾವು ಸಮಾನ ಮನಸ್ಕರರು ಕಟ್ಟಿಕೊಂಡ ಬಳಗ‌. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೊಠಡಿಯಲ್ಲಿ ಬಳಗದ ಅಲಮಾರಿಗಳನ್ನು ಇಟ್ಟುಕೊಳ್ಳಲು ಅವಕಾಶ ಮಾಡಿಕೊಟ್ಟಿದೆ.ಇದು ಈ ಶಾಲೆಯ ಮತ್ತೊಂದು ಹೆಮ್ಮೆ.


ಶ್ರೀ ಇಂಗಳಗಿ ದಾವಲಮಲೀಕ
ಶಿಕ್ಷಕ ಸಾಹಿತಿಗಳು ಹತ್ತಿಮತ್ತೂರು

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!