- Advertisement -
ಮೂಡಲಗಿ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಗಳು ಹತ್ತಿರವಾದಂತೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡವು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಜವಾಬ್ದಾರಿಯು ಹೆಚ್ಚಿದೆ ಎಂದು ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಹೇಳಿದರು.
ತಾಲೂಕಿನ ಮುನ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಶಿಕ್ಷಣ ಪ್ರೇಮಿ ಈರಪ್ಪ ಢವಳೇಶ್ವರ ಅವರ ಪುತ್ರಿಯ ಐದನೇ ವರ್ಷದ ಹುಟ್ಟುಹಬ್ಬದ ನಿಮಿತ್ತವಾಗಿ ಸಸಿ ನೆಟ್ಟು ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗಲು, ಪರೀಕ್ಷೆ ಸಮಯದಲ್ಲಿ ಒತ್ತಡ ನಿವಾರಣೆ ಮಾಡಿಕೊಳ್ಳಲು ಹಾಗೂ ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸಲು ಶಿಕ್ಷಕರು ಅನುಸರಿಸಬೇಕಾದ ಕೆಲವು ಸಾಮಾನ್ಯ ಕ್ರಮಗಳನ್ನು ಅನುಸರಿಸಬೇಕೆಂದುರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡ ಆನಂದರಾವ್ ನಾಯಕ್, ಮುಖ್ಯಶಿಕ್ಷಕ ಎ.ಎ.ಪಿರಜಾದೆ, ಶಿಕ್ಷಕರಾದ ವೈ.ವಿ.ಮಳಲಿ, ಎಸ್.ಎಸ್.ಮೇಣಶ್ಯಾಪ್ಪಗೋಳ, ಸಮಾಜ ಸೇವಕ ಗುರು ಗಂಗನ್ನವರ ಹಾಗೂ ಶಿಕ್ಷಕರು ಮಕ್ಕಳು ಉಪಸ್ಥಿತಿರಿದ್ದರು.