ಲಸಿಕಾ ಮೇಳವನ್ನು ಯಶಸ್ವಿಗೊಳಿಸಲು ತಹಶೀಲ್ದಾರ ಮಹಾತ್ ಕರೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮೂಡಲಗಿ: ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶದಿಂದ ಸರ್ಕಾರವು ರಾಜ್ಯದಾದ್ಯಂತ ಲಸಿಕಾ ಮೇಳ ಆಯೋಜಿಸಿದೆ. ಮೂಡಲಗಿ ತಾಲೂಕಿನ ಎಲ್ಲ ನಾಗರಿಕರು ಲಸಿಕಾ ಮೇಳ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ ಡಿ.ಜಿ.ಮಹಾತ್ ಹೇಳಿದರು.

ಪಟ್ಟಣದ ಗಾಂಧಿ ಚೌಕ್ ಬಳಿ ಇರುವ ಹನುಮಾನ ದೇವಸ್ಥಾನದಲ್ಲಿ ಆಯೋಜಿಸಲಾದ ಲಸಿಕಾ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಭಾಂವಿ ಮತ ಕ್ಷೇತ್ರ ವ್ಯಾಪ್ತಿ ಸುಮಾರು 25 ಸಾವಿರ ಲಸಿಕೆಗಳನ್ನು ನೀಡುವ ಗುರಿ ಹೊಂದಲಾಗಿದ್ದು, ಆ ಪ್ರಕಾರ ಪ್ರತಿಯೊಂದು ಗ್ರಾಮಗಳಲ್ಲಿ ಲಸಿಕಾ ಕೇಂದ್ರಗಳನ್ನು ತರೆಯಲಾಗಿದೆ. ಅರಭಾಂವಿ ಮತ ಕ್ಷೇತ್ರ ವ್ಯಾಪ್ತಿಯಲ್ಲಿ 123 ಕೇಂದ್ರಗಳನ್ನು ತೆರೆದು, ಸುಮಾರು 1300 ಸಿಬ್ಬಂದಿಗಳನ್ನು ನೇಮಿಸಿ ಲಸಿಕಾ ಮೇಳವನ್ನು ಆರಂಭಿಸಲಾಗಿದೆ ಎಂದರು.

ಲಸಿಕಾ ಮೇಳದಲ್ಲಿ ಹೆಚ್ಚು ಜನರಿಗೆ ಲಸಿಕೆ ಪಡೆಯಲು ಅನುವಾಗುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಇತರೆ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು, ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಸಕ್ರಿಯವಾಗಿ ತೊಡಗಿಕೊಂಡು ಲಸಿಕಾ ಮೇಳವನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ ಎಂದರು.

- Advertisement -

ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ತವಾಗಿ ಅರಭಾಂವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಲಸಿಕೆ ಮೇಳದಲ್ಲಿ ಲಸಿಕೆ ಪಡೆದುಕೊಳ್ಳುವ ಪ್ರತಿಯೊಬ್ಬ ನಾಗರಿಕರಿಗೆ ಸಿಹಿ ನೀಡಿ, ನಾಗರಿಕರು ಲಸಿಕೆ ಹಾಕಿಸಿಕೊಳ್ಳುವಂತೆ ಮತ್ತಷ್ಟು ಉತ್ಸಾಹ ನೀಡುವಂತೆ ಮಾಡಿರುವ ಅವರು ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ಈ ವಿಶೇಷ ಕೋವಿಡ್ ಲಸಿಕಾ ಮೇಳದಲ್ಲಿ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್ ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿದ್ದು, ಮೂರನೇ ಅಲೆ ಅಪ್ಪಳಿಸುವ ಮುನ್ನ ಅರಭಾಂವಿ ಮತ ಕ್ಷೇತ್ರದ ಎಲ್ಲ ನಾಗರಿಕರು ಲಸಿಕೆ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಾಯ್.ಎಮ್.ಗುಜನಟ್ಟಿ, ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರ್ದಿ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಭಾರತಿ ಕೋಣಿ, ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳೋಖಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಹಾಗೂ ಪುರಸಭೆ ಸದಸ್ಯರು, ಪಟ್ಟಣದ ಮುಖಂಡರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!