ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ...

ಪೋಸ್ಟ್ ಕಾರ್ಡಗಳಲ್ಲಿ ಪ್ರಧಾನಿಗೆ ಶುಭಾಶಯ

ಸಿಂದಗಿ: ಭಾರತೀಯ ಜನತಾ ಪಾರ್ಟಿ ಸಿಂದಗಿ ಮಂಡಲ ವತಿಯಿಂದ ನಗರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ವಿಶ್ವ ನಾಯಕ ನಮ್ಮ ಭಾರತದ ಹೆಮ್ಮೆಯ ಪ್ರಧಾನಮಂತ್ರಿ ಮೋದೀಜಿ...

ಗೋಕಾಕ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಭರ್ತಿಯಾಗುವ ಮಟ್ಟ ತಲುಪಿದ್ದು, ಘಟಪ್ರಭಾ ನದಿಗೆ 1,36,591 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೆರೆಪೀಡಿತರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಹಿಡಕಲ್ ಜಲಾಶಯಕ್ಕೆ ಈಗಾಗಲೇ 97,000 ಕ್ಯೂಸೆಕ್ಸ್ ನೀರು ಒಳಹರಿವು ಇದ್ದು, ಜಲಾಶಯದಿಂದ ಘಟಪ್ರಭಾ ನದಿಗೆ 50,000 ಕ್ಯೂಸೆಕ್ಸ್ ನೀರು ಬಿಡಲಾಗಿದೆ ಎಂದು ಹೇಳಿದ್ದಾರೆ.

ಶನಿವಾರದ ಮಧ್ಯಾಹ್ನದ ವರದಿಯಂತೆ ಹಿರಣ್ಯಕೇಶಿ ನದಿಯಿಂದ 55591 ಕ್ಯೂಸೆಕ್ಸ್ ನೀರು, ಮಾರ್ಕಂಡೇಯ ನದಿಯಿಂದ 15000 ಕ್ಯೂಸೆಕ್ಸ್ ನೀರು ಹಾಗೂ ಬಳ್ಳಾರಿ ನಾಲಾದಿಂದ 16000 ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಬರುತ್ತಿದ್ದು ಇದರಿಂದ ಒಟ್ಟಾರೆ 136591 ಕ್ಯೂಸೆಕ್ಸ್ ನೀರು ಈಗಾಗಲೇ ಹರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

- Advertisement -

2019 ರಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಸಾರ್ವಜನಿಕ ಆಸ್ತಿ-ಪಾಸ್ತಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಆವಾಗ 2.40 ಲಕ್ಷ ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಬಂದಿತ್ತು. ಆ ಸಂದರ್ಭದಲ್ಲಿ ನಮ್ಮ ಅವಳಿ ತಾಲೂಕುಗಳಲ್ಲಿ ವಿಪರೀತ ಪ್ರವಾಹ ಉಂಟಾಗಿ ಪರಿಸ್ಥಿತಿ ಚಿಂತಾಜನಕವಾಗಿತ್ತು ಎಂದು ಸ್ಮರಿಸಿಕೊಂಡ ಅವರು, ಶನಿವಾರ ಬೆಳಗಿನ ಜಾವದಿಂದ ಮಳೆಯ ಪ್ರಮಾಣ ಇಳಿಮುಖವಾಗಿದ್ದರಿಂದ ನೀರಿನ ಮಟ್ಟ ಕಡಿಮೆಯಾಗುವ ಸಾಧ್ಯತೆ ಇದೆ. ನೆರೆಪೀಡಿತ ಪ್ರದೇಶಗಳಿಗೆ ಈಗಾಗಲೇ ಟೀಂ ಎನ್‍ಎಸ್‍ಎಫ್ ಭೇಟಿ ನೀಡಿ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತಿದೆ ಎಂದು ಹೇಳಿದ್ದಾರೆ.

ಸಂತ್ರಸ್ತರಿಗೆ ಊಟೋಪಚಾರಕ್ಕಾಗಿ ತೊಂದರೆಯಾಗಬಾರದೆನ್ನುವ ಉದ್ಧೇಶದಿಂದ ಮುಳುಗಡೆಯಾಗಿರುವ ನೆರೆಪೀಡಿತ ಪ್ರದೇಶಗಳಲ್ಲಿ ಸರ್ಕಾರದ ಸಹಭಾಗಿತ್ವದಲ್ಲಿ ಸ್ವಂತ ವೆಚ್ಚದಲ್ಲಿ 12 ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಟೀಂ ಎನ್‍ಎಸ್‍ಎಫ್ ತಂಡದಲ್ಲಿ ಕಂದಾಯ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಜಲಾವೃತಗೊಂಡ ಗ್ರಾಮಗಳಲ್ಲಿ ಜನರ ಸುರಕ್ಷತೆಗಾಗಿ ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ ಅಗತ್ಯವಿರುವಷ್ಟು ಬೋಟ್‍ಗಳ ವ್ಯವಸ್ಥೆ ಮಾಡಲಾಗಿದೆ. ನದಿ ತೀರದಲ್ಲಿರುವ ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ಮಸಗುಪ್ಪಿ, ಹುಣಶ್ಯಾಳ ಪಿಜಿ(ಹಳೇ ಊರು) ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು, ಉಳಿದ ಗ್ರಾಮಗಳು ಭಾಗಶಃ ಜಲಾವೃತಗೊಂಡಿವೆ ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.


ಕಳೆದ 2019 ರಲ್ಲಿ ಸಂಭವಿಸಿರುವ ಪ್ರವಾಹ ಈ ಬಾರಿ ಬಹುಶಃ ಬರಲಿಕ್ಕಿಲ್ಲ. ಅಂದು 2.40 ಲಕ್ಷ ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಬಂದಿತ್ತು. ಈ ಬಾರಿ 1,36,591 ಕ್ಯೂಸೆಕ್ಸ್ ನೀರು ಬರುತ್ತಿದೆ. ಮಳೆಯ ಪ್ರಮಾಣವೂ ತಗ್ಗುತ್ತಿದೆ. ನೆರೆಪೀಡಿತ ಪ್ರದೇಶಗಳಿಗೆ ಈಗಾಗಲೇ ವಿವಿಧ ಇಲಾಖೆಗಳನ್ನೊಳಗೊಂಡ ಟೀಂ ಎನ್‍ಎಸ್‍ಎಫ್ ಭೇಟಿ ನೀಡುತ್ತಿದೆ. ಸಂತ್ರಸ್ತರಿಗೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಆದಷ್ಟು ಎಲ್ಲರೂ ಸುರಕ್ಷಿತವಾಗಿರಬೇಕು. ಕೊರೋನಾ ಬಗ್ಗೆಯೂ ಕಾಳಜಿಯಿಂದಿರಬೇಕು.

-ಬಾಲಚಂದ್ರ ಜಾರಕಿಹೊಳಿ, ಶಾಸಕ.

- Advertisement -
- Advertisement -

Latest News

ಲೇಖಕಿ ಜಯಶ್ರೀ ಅಬ್ಬಿಗೇರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಯ ಗರಿ

ಬೆಳಗಾವಿ: ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಪ್ರತಿಷ್ಠಾನ ಟ್ರಸ್ಟ ನೀಡುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ...
- Advertisement -

More Articles Like This

- Advertisement -
close
error: Content is protected !!