ಜಲಪಾತ ನೋಡಲು ಬಂದ ಪ್ರವಾಸಿ ಯುವತಿ ಕಾಲು ಜಾರಿ ಸಾವು

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಯಾದಗಿರ – ಜಿಲ್ಲೆಯ ಗುರುಮಠಕಲ್ ತಾಲೂಕಿನ ನಜರಪೂರ್ ಗ್ರಾಮ ಮತ್ತು ಗುರುರುಮಠಕಲ್ ಮಧ್ಯಂತರದಲ್ಲಿ ಫಾಲ್ಸ್ ನೋಡಲು ಚಿತ್ತಾಪುರದಿಂದ ಬಂದಿದ್ದ ಓರ್ವ ಯುವತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ಈ ವರ್ಷ ಫಾಲ್ಸ್ ಹತ್ತಿರ ಇದು ಎರಡನೇ ಘಟನೆಯಾಗಿದ್ದು ಯುವಕನೊಬ್ಬ ಈಜಲು ಹೋಗಿ ಮೃತಪಟ್ಟಿದ್ದ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ದಯವಿಟ್ಟು ಆ ಫಾಲ್ಸ್ ಸುತ್ತಮುತ್ತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರ ಈರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.

- Advertisement -

ಭಾನುವಾರ ಬಂತೆಂದರೆ ಸಾಕು ಇಲ್ಲಿ ಪ್ರವಾಸಿಗರು ಸಾಲುಗಟ್ಟುತ್ತಾರೆ. ಅದರಂತೆ ಈ ಭಾನುವಾರ ಕೂಡ ಗುರುಮಠಕಲ್ ನ ಪ್ರವಾಸಿ ತಾಣ ವಾದ ದಬದಬೆ ವೀಕ್ಷಿಸಲು ಬಂದ ಗೃಹಿಣಿ ಐಶ್ವರ್ಯ ಶರಣು (23) ನೀರು ಪಾಲಾದ ಘಟನೆ ಜರುಗಿದೆ.

ಚಿತ್ತಾಪುರದಿಂದ ದಬದಬೆ ಜಲಪಾತ ನೋಡಲು ಕುಟುಂಬದಲ್ಲಿ ಅತ್ತೆ ಇಬ್ಬರು ಸೊಸೆಯಂದಿರೊಂದಿಗೆ ಅಕ್ಕಪಕ್ಕದ ಮಹಿಳೆಯರು ಸೇರಿ ಸುಮಾರು ೭ ಜನರು ಮಕ್ಕಳೊಂದಿಗೆ ಆಗಮಿಸಿದ್ದರು. ನಾಲ್ಕೈದು ಜನ ಮಹಿಳೆಯರು ನೀರಿನಲ್ಲಿ ಇಳಿದಿದ್ದಾರೆ. ನೀರಿನ ಸುಳಿಯಲ್ಲಿ ಸಿಲುಕಿದ ನಾಲ್ವರಲ್ಲಿ ಮೂವರನ್ನು ಸ್ಥಳಿಯರು ರಕ್ಷಿಸಿದ್ದಾರೆ ದುರದೃಷ್ಟವೆಂದರೆ ಐಶ್ವರ್ಯ ನೀರುಪಾಲಾಗಿದ್ದಾಳೆ.

ಸುಮಾರು ಎರಡು ಗಂಟೆಗಳ ಕಾಲ ಹುಡುಕಾಟದ ನಂತರ ಮೃತದೇಹ ಪತ್ತೆಯಾಗಿದೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. 14 ತಿಂಗಳ ಮಗು ತಾಯಿಯನ್ನು ಕಳೆದು ಕೊಂಡಿದೆ.

ಜಿಲ್ಲಾಡಳಿತಕ್ಕೆ ಹಿಡಿ ಶಾಪ:

ಇಲ್ಲಿಗೆ ಪ್ರತಿ ಭಾನುವಾರ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ . ಆದರೆ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿರುವುದು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಗುರುಮಠಕಲ್ ಪಿಐ ಖಾಜಾ ಹುಸೇನ, ಪಿಎಸ್ಐ ಶ್ರೀಶೈಲ ಹಾಗೂ ತಂಡ ಪರಿಶೀಲನೆ ನಡೆಸಿದ್ದಾರೆ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!