ಹಿರಿಯ ಕನ್ನಡಪರ ಹೋರಾಟಗಾರ ರಾಮಚಂದ್ರ ಢವಳಿ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಳಗಾವಿ – ಬೆಳಗಾವಿಯ ಹಿರಿಯ ಕನ್ನಡಪರ ಹೋರಾಟಗಾರರು, ಕನ್ನಡ ನುಡಿಸಿರಿ ಪ್ರಶಸ್ತಿ ವಿಜೇತರು, ಚುಟುಕು ಸಾಹಿತಿಗಳು ಮತ್ತು ಲೇಖಕರು ಹಾಗೂ ನೇಕಾರ ರತ್ನ ಪ್ರಶಸ್ತಿ ವಿಜೇತರಾದ ರಾಮಚಂದ್ರ ಢವಳಿ ತಮ್ಮ 78ನೇ ವಯಸ್ಸಿನಲ್ಲಿ ನಿಧನರಾದರು.

ಕನ್ನಡ ಗಡಿ ದಾಖಲೆಗಳ ಕುರಿತು ಮತ್ತು ಕನ್ನಡದ ಗಡಿಯ ಕುರಿತಾದ ಪ್ರತಿಯೊಂದು ಹೋರಾಟಗಳಲ್ಲಿ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದ ನಾಡು, ನುಡಿ, ನೆಲ, ಜಲ ಕುರಿತ ಅಪಾರ ಅಭಿಮಾನ ಹೊಂದಿದ್ದ ಇವರು ಕನ್ನಡಕ್ಕೆ ಕುತ್ತು ಬಂದಾಗ ಮತ್ತು ಕನ್ನಡ ನಾಡಧ್ವಜದ ಕುರಿತು ಗದ್ದಲ ಎದ್ದಾಗ ತಮ್ಮ ಇಳಿ ವಯಸ್ಸಿನಲ್ಲೂ ಸಹ ಎದೆಗುಂದದೆ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಅವರ ಕನ್ನಡ ಪ್ರೇಮ ನಿಜಕ್ಕೂ ಶ್ಲಾಘನೀಯವಾಗಿದೆ.

ಅದೇ ರೀತಿ ಸಾಹಿತ್ಯದಲ್ಲೂ ಸಹ ಅಪಾರ ಆಸಕ್ತಿ ಹೊಂದಿದ್ದ ಅವರು ಅನೇಕ ಕವನಗಳನ್ನು ಮತ್ತು ಲೇಖನಗಳನ್ನು ಬರೆದಿದ್ದಾರೆ. ಎಷ್ಟೋ ಹೋರಾಟಗಳಲ್ಲಿ ಭಾಗಿಯಾಗಿದ್ದರೂ ಸಹ ಅವರ ಹೆಸರು ಮುಂಚೂಣಿಗೆ ಬಾರದೇ ಇದ್ದದ್ದು ನಿಜಕ್ಕೂ ಬೇಸರದ ಸಂಗತಿ.

- Advertisement -

ತಾಯಿ ಭುವನೇಶ್ವರಿ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಜಿಲ್ಲಾಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಸದಸ್ಯರು, ಸಾಹಿತ್ಯಾಸಕ್ತರು ಮತ್ತು ಕನ್ನಡ ಅಭಿಮಾನಿಗಳು ತಮ್ಮ ಶೋಕ ಸಂದೇಶದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!