ಜಿಲ್ಲಾಸ್ಪತ್ರೆ ಮುಂದಿನ ದಿನಗಳಲ್ಲಿ ಹೆಚ್ಚು ಅಭಿವೃದ್ಧಿ ಕಾಣಲಿದೆ

0
496

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಇಂದಿನಿಂದ ಹೈಜೀನ್ ಕೀಟ್ ವಿತರಣೆ ಮಾಡಲಾಗುವುದು.

ಶುಕ್ರವಾರ ಬೆಳಗಾವಿ ನಗರದಲ್ಲಿ ಇರುವ ಜಿಲ್ಲಾಸ್ಪತ್ರೆಯ ರೋಗಿಗಳ ಆರೋಗ್ಯದ ದೃಷ್ಟಿಯಿಂದ ವಿವಿಧ ವಾರ್ಡ್ ಗಳಿಗೆ ತೆರಳಿ ಹೈಜೀನ್ ಕೀಟ್ ವಿತರಣೆ ಮಾಡಲಾಯಿತು.

ಇಡೀ ರಾಜ್ಯದಲ್ಲಿ ಪ್ರಥಮ ಬಾರಿಗೆ ಎಲ್ಲ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಸಾನಿಟೈಸರ್ ಕಿಟ್ ವಿತರಣೆ ಮಾಡಲಾಗಿದೆ.‌ ಮುಂದೆಯೂ ಕೂಡಾ ಯಾವುದೇ ರೋಗಿ ಆಸ್ಪತ್ರೆಯಲ್ಲಿ ದಾಖಲಾದರೆ ಅವರಿಗೆ ಸಾನಿಟೈಸರ್ ಕಿಟ್ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ ಹಾಗೂ ಭೀಮ್ಸ್ ಆಡಳಿತ ಅಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲಾನ ಬಿಸ್ವಾಸ ಘೋಷಿಸಿದ್ದಾರೆ.

ಬರುವ ದಿನಗಳಲ್ಲಿ ರೋಗಿಗಳಿಗೆ ಮತ್ತು ಆಸ್ಪತ್ರೆಯ ಅಭಿವೃದ್ಧಿಗೆ ಏನು ಸೌಲಭ್ಯ ಒದಗಿಸಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ. ಈಗಾಗಲೇ ಬೆಳಗಾವಿ ಜಿಲ್ಲಾಸ್ಪತ್ರೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ಎಕ್ಸರೆ, ಸಿಟಿ ಸ್ಕ್ಯಾನ್ ಹಾಗೂ ಅಲ್ಟ್ರಾಸೌಂಡ್ ಸೇವೆಗಳು ದಿನದ 24 ಗಂಟೆಯು ಕಾರ್ಯನಿರ್ವಹಿಸುತ್ತಿದೆ. ಅನಾವಶ್ಯಕವಾಗಿ ರೋಗಿಗಳು ಬೇರೆ ಕಡೆ ಚಿಕಿತ್ಸೆ ಪಡೆದು ಹಣ ವ್ಯಯ ಮಾಡದೇ ಬೆಳಗಾವಿ ಜಿಲ್ಲಾಸ್ಪತ್ರೆಯ ಉಪಯೋಗ ಪಡೆಯಬೇಕು.

ಜಿಲ್ಲಾಸ್ಪತ್ರೆಯ ಅಧಿಕಾರಿಗಳಾದ ಡಾ. ಆರ್.ಜಿ ವಿವೇಕಿ, ಎ.ಬಿ ಪಾಟಿಲ್, ಎ.ಎಸ್ ಬಳ್ಳಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.