spot_img
spot_img

ಶಾಲಾ ಕಟ್ಟಡದ ಮೇಲಿಂದ ಬಿದ್ದ ಬಾಲಕಿ

Must Read

ಬೀದರ – ಶಿಥಿಲಗೊಂಡ ಶಾಲೆಯ ಕಟ್ಟಡದ ಮೇಲಿಂದ ಬಾಲಕಿಯೊಬ್ಬಳು ಬಿದ್ದು ಗಂಭೀರ ಗಾಯ ಮಾಡಿಕೊಂಡ ಘಟನೆ ನಗರದ ಹೊರವಲಯದಲ್ಲಿರುವ ಮರಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಬಾಲಕಿಯ ಕೈ ಮುರಿದಿದ್ದು ನಗರದ ಗುರುನಾನಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಮರಕಲ್ ಪ್ರಾಥಮಿಕ ಶಾಲೆಯ ಮೆಟ್ಟಿಲುಗಳು ಶಿಥಿಲಗೊಂಡ ಹಲವು ವರ್ಷಗಳೇ ಆಗಿದ್ದರೂ ಶಿಕ್ಷಣ ಇಲಾಖೆಯವರಾಗಲೀ, ಯಾವುದೇ ಅಧಿಕಾರಿಗಳಾಗಲಿ ಇತ್ತ ಗಮನ ಹರಿಸಿಲ್ಲ ಎಂಬುದು ಗ್ರಾಮಸ್ಥರ ದೂರು. ಈ ಘಟನೆಯಲ್ಲಿ ಕೈ ಮುರಿದುಕೊಂಡ ಬಾಲಕಿಗೆ ಪರಿಹಾರ ಕೊಡಬೇಕು ಹಾಗೂ ಈವರೆಗೆ ಶಿಥಿಲ ಕಟ್ಟಡದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!