ಹುಮ್ನಾಬಾದ ಪೋಲಿಸರ ಭರ್ಜರಿ ಕಾರ್ಯಾಚರಣೆ; 38 ಲಕ್ಷ ರೂ.ಮತ್ತು ಲಾರಿ ಸಮೇತ ಆರೋಪಿ ಬಂಧನ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಬೀದರ – ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ರಾ.ಹೆ-65ರ ಮೇಲೆ ಲಾರಿಯನ್ನು ಅಡ್ಡಗಟ್ಟಿ ಸುಲಿಗೆ ಮಾಡಿ ಟ್ಯಾಂಕರ್ ಲಾರಿ ಸಮೇತ ಪರಾರಿಯಾಗಿದ್ದ ಆರೋಪಿಗಳನ್ನು ಹಿಡಿದು ಹೆಡೆಮುರಿ ಕಟ್ಟಿರುವ ಹುಮ್ನಾಬಾದ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ನಗದು ಮತ್ತು ಲಾರಿ ವಶಪಡಿಸಿಕೊಂಡಿದ್ದಾರೆ.

ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 65ರ ಮೇಲಿನ ಶಕುಂತಲಾ ಪಾಟೀಲ ವಸತಿ ಶಾಲೆ ಬಳಿ ಚಲಿಸುತ್ತಿದ್ದ ಲಾರಿಗೆ ತಮ್ಮ ಐಶರ್ ವಾಹನ ಅಡ್ಡಗಟ್ಟಿ ರಾಜೇಶಕುಮಾರ, ರಂಜಿತ ಮತ್ತು ಜಗದೀಶನಾಥ ಇವರಿಗೆ ಹೊಡೆದು, ನಗದು ಹಣ, ಮೊಬೈಲ್ ದೋಚಿಕೊಂಡು ಕೆಮಿಕಲ್ ಟ್ಯಾಂಕರ್ ಲಾರಿ ಸಮೇತ ಆರೋಪಿಗಳು ಪರಾರಿಯಾಗಿದ್ದರು.

ಈ ಬಗ್ಗೆ ಮೂವರೂ ಹುಮನಾಬಾದ್ ಪೊಲೀಸರಿಗೆ ದೂರು ನೀಡಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಾರಾಷ್ಟ್ರ ಮೂಲದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಮಾರ್ಗದರ್ಶನದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದಾಗಿ ಮಂಗಳವಾರ ಹುಮನಾಬಾದ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ಟ್ಯಾಂಕರ್ ಸಮೇತ ಆರೋಪಿಗಳನ್ನು ಮಾಧ್ಯಮ ಪ್ರತಿನಿಧಿಗಳ ಎದುರು ಹಾಜರಪಡಿಸಿದ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರು ಪ್ರಕರಣದ ಬಗ್ಗೆ ವಿವರಿಸಿದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಪ್ರಕಾಶ ಬ್ಯಾಕೋಡ್, ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ, ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ರವಿಕುಮಾರ, ಅಪರಾಧ ವಿಭಾಗದ ಕಿರಣಕುಮಾರ, ಸಂಚಾರ ಪೊಲೀಸ್ ಠಾಣೆಯ ಬಸವರಾಜ ಹಾಗೂ ಸಿಬ್ಬಂದಿ ಈ ವೇಳೆ ಹಾಜರಿದ್ದರು.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!