ಸಂವಿಧಾನ ಗೌರವಿಸುವುದೇ ದೇಶದ ಗೌರವ – ಕಡಾಡಿ

Must Read

ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ.26 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿಯಲ್ಲಿ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಸಂವಿಧಾನ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡಿದೆ, ಜಾತಿ, ಮತ, ಪಂಥಗಳ ಭೇದ ತೊರೆದು ಭಾರತೀಯ ಎನ್ನುವ ತತ್ವದಡಿ ದೇಶದಲ್ಲಿ ಸಾಮರಸ್ಯ ಮೂಡಿಸಬೇಕಾಗಿದೆ. ಅದೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ನೀಡುವ ಅತಿದೊಡ್ಡ ಗೌರವವಾಗಿದೆ ಎಂದರು.

ಶ್ರೀ ಮಹಾಲಕ್ಷ್ಮೀ ಪಿ.ಕೆ.ಪಿ.ಎಸ್, ಕಲ್ಲೋಳಿ ಹಾಲು ಉತ್ಪಾದಕರ ಸಹಕಾರಿ ಸಂಘ, ಸೇವಾ ಸಂಸ್ಥೆಯ ಆಡಳಿತ ಕಛೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿದರು.

ಸಹಕಾರಿ ನಿರ್ದೇಶಕರಾದ ಶ್ರೀಶೈಲ ತುಪ್ಪದ, ಬಾಳಪ್ಪ ಸಂಗಟಿ, ಶಿವಗೊಂಡ ವ್ಯಾಪಾರಿ, ಸಹದೇವ ಹೆಬ್ಬಾಳ, ಸಿದ್ದಪ್ಪ ಹೆಬ್ಬಾಳ, ಪ್ರಭು ಕಡಾಡಿ, ಹಣಮಂತ ಸಂಗಟಿ, ರಾಮಲಿಂಗ ಬಿ.ಪಾಟೀಲ, ಮಹಾದೇವ ಮಧಬಾಂವಿ, ಕಾಡೇಶ ಗೋರೋಶಿ, ತುಕಾರಾಮ ಪಾಲ್ಕಿ, ಗುರುನಾಥ ಮಧಬಾಂವಿ, ಅಜೀತ ಚಿಕ್ಕೋಡಿ, ಶಂಕರ ಖಾನಗೌಡ್ರ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ ಸೇರಿದಂತೆ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರೂ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group