ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮಕ್ಕಳ ಭವಿಷ್ಯಕ್ಕೆ ಆಧಾರವಾಗಿದೆ – ಅರುಣ ಶಹಾಪೂರ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮೂಡಲಗಿ: ರಾಷ್ಟ್ರೀಯ ಶಿಕ್ಷಣ ನೀತಿ ಮಕ್ಕಳ ಭವಿಷ್ಯಕ್ಕೆ ಆಧಾರವಾಗಿದೆ. ಈ ನೀತಿ ಮಕ್ಕಳಿಗೆ ಶಿಕ್ಷಣದಲ್ಲಿ ಜ್ಞಾನದ ಜೊತೆಗೆ ಬದುಕಿನ ಕೌಶಲ್ಯ ಪರಿಚಯ ಮಾಡಿ ಬದುಕಿಗೆ ಅಂಕಗಳು ಮುಖ್ಯವಲ್ಲ ಜ್ಞಾನಕೌಶಲ್ಯ ಮುಖ್ಯವಾಗಿದ್ದು ಅಂತಹ ಶಿಕ್ಷಣ ನೀಡುವ ಬಗ್ಗೆ ಈ ನೀತಿ ಮಹತ್ವವನ್ನು ಹೊಂದಿದೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳ್ಳಲು ಪ್ರತ್ಯೇಕ ಶೈಕ್ಷಣಿಕ ಪ್ರಾಧಿಕಾರಗಳು ರಚನೆಯಾಗಬೇಕಾಗಿದೆ. ಯಾವುದೇ ಶಿಕ್ಷಣ ನೀತಿಯನ್ನು ಜಾರಿಗೆತರುವಲ್ಲಿ ಮುಖ್ಯವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು ಶಿಕ್ಷಕರ ಮನಸ್ಸು ಬದಲಾಗದೇ ಶಿಕ್ಷಣ ನೀತಿ ಬದಲಾಗದು ಶಿಕ್ಷಕರು ಮನಸ್ಸು ಮಾಡಿದರೆ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಜಾರಿಗೆ ತರಲು ಸಾಧ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಎನ್ ಇ. ಪಿ ಅನುಷ್ಠಾನ ಸಮಿತಿ ಸದಸ್ಯ ಅರುಣ ಶಹಾಪೂರ ಹೇಳಿದರು.

ಅವರು ಪಟ್ಟಣದ ಆರ್.ಡಿ.ಎಸ್ ಸಂಸ್ಥೆಯಲ್ಲಿ ಜರುಗಿದ ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020-21ರ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮುಖ್ಯೋಪಾದ್ಯಾಯರುಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

- Advertisement -

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಶಿಕ್ಷಣದ ಸಮಗ್ರ ಬದಲಾವಣೆಯ ನಿಯಮಗಳೊಂದಿಗೆ ಶೈಕ್ಷಣಿಕ ವಿಚಾರಗಳನ್ನು ತಳಮಟ್ಟದಲ್ಲಿ ಸಮಗ್ರತೆಯೊಂದಿಗೆ ರೂಪಿಸಿ ವೈಜ್ಞಾನಿಕ ಕಲ್ಪನೆಯೊಂದಿಗೆ ಶಿಕ್ಷಣ ರೂಪಿಸುವ ನವೀನ ವಿಧಾನವಾಗಿದ್ದು ಅದರ ಪರಿಪೂರ್ಣ ಅನುಷ್ಠಾನಕ್ಕೆ ಆದ್ಯತೆ ನೀಡುವುದು ಶಿಕ್ಷಣ ಇಲಾಖೆಯು ಮುಖ್ಯ ಕರ್ತವ್ಯವಾಗಿದೆ ಎಂದರು.

ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಮಾತನಾಡಿ, ಪರಿಣಾಮಕಾರಿ ಬೋಧನೆ ಹಾಗೂ ಫಲಪ್ರದ ಶಿಕ್ಷಣ ದೊರೆಯಬೇಕಾದರೆ ನಿರಂತರ ಮಾರ್ಗದರ್ಶನ ಹಾಗೂ ಕಲಿಕಾ ಆಯಾಮಗಳು ಬದಲಾಗುತ್ತಿರಬೇಕು. ವಿದ್ಯಾರ್ಥಿಯ ಕಲಿಕಾ ಮಟ್ಟ ಹಾಗೂ ಶಿಕ್ಷಕರ ವೃತ್ತಿ ನೈಪುಣ್ಯತೆ ಹೆಚ್ಚಿಸುವಲ್ಲಿ ಶಿಕ್ಷಣ ನೀತಿಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಗುಣಾತ್ಮಕ ಕಲಿಕೆಯಾಗಲು ಸಾಧ್ಯವಾಗುವದು ಎಂದರು.

ಕಾರ್ಯಕ್ರಮದಲ್ಲಿ ಮೂಡಲಗಿ ಬಿಇಒ ಎ.ಸಿ. ಮನ್ನಿಕೇರಿ ಗೋಕಾಕ ಬಿಇಒ ಜಿ. ಬಿ. ಬಳಿಗಾರ, ಚಿಕ್ಕೋಡಿ ಶೈ. ಜಿಲ್ಲೆಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷರ ವಿ.ಡಿ. ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ಸಿದ್ರಾಮ ಲೋಕನ್ನವರ, ಡಿವಾಯ್‍ಪಿಸಿ ಎಸ್.ಎಸ್.ಎ ಮತ್ತು ಆರ್.ಎಮ್.ಎಸ್.ಎ ಆಂಜನೇಯ, ಚಿಕ್ಕೋಡಿ ಜಿಲ್ಲಾ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷರ ಅಪ್ಪುಗೋರಕನವರ, ಆರ್.ಡಿ.ಎಸ್ ಸಂಸ್ಥೆಯ ಅಧ್ಯಕ್ಷ ಸಂತೋಷ ಪಾರ್ಶಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮುಖ್ಯೋಪಾಧ್ಯಾಯರು ಸಂಪನ್ಮೂಲ ಶಿಕ್ಷಕರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಇಸಿಓ ಸತೀಶ್ ಬಿ.ಎಸ್ ನಿರೂಪಿಸಿ, ಬಿಇಒ ಎ.ಸಿ. ಮೆನ್ನಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!