spot_img
spot_img

ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿ- ಸಂಸದ ಈರಣ್ಣ ಕಡಾಡಿ ಸ್ವಾಗತ

Must Read

spot_img
- Advertisement -

ಮೂಡಲಗಿ: ಕೇಂದ್ರ ಸಚಿವ ಸಂಪುಟವು 2021-22ನೇ ಸಾಲಿನ ಕಬ್ಬಿನ ಎಫ್.ಆರ್.ಪಿ. ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 290 ರೂ.ಗೆ ಹೆಚ್ಚಿಸಿದೆ. ಕೇಂದ್ರ ಸರ್ಕಾರದ ಈ ಕ್ರಮ ಸ್ವಾಗತಾರ್ಹ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ಬುಧವಾರ ಆ 25 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಕಬ್ಬಿನ ಎಫ್.ಆರ್.ಪಿ. ಬೆಲೆ ಹೆಚ್ಚಳದಿಂದ 5 ಕೋಟಿ ಕಬ್ಬು ಬೆಳೆಯುವ ರೈತರಿಗೆ ಮತ್ತು ಅವರ ಅವಲಂಬಿತರಿಗೆ ಹಾಗೂ ಸಕ್ಕರೆ ಕಾರ್ಖಾನೆಗಳಲ್ಲಿ ಕೆಲಸ ಮಾಡುವ 5 ಲಕ್ಷ ಕಾರ್ಮಿಕರಿಗೆ ಮತ್ತು ಅವಲಂಬಿತರಿಗೆ ಸಹಾಯವಾಗಲಿದೆ ಎಂದರು.

2013-14ನೇ ಸಾಲಿನಲ್ಲಿ ಎಫ್.ಆರ್.ಪಿ. ಪ್ರತಿ ಕ್ವಿಂಟಲ್‌ಗೆ ರೂ.210 ಇದ್ದು, 2021-22ನೇ ಸಾಲಿಗೆ ಎಫ್.ಆರ್.ಪಿ. ಪ್ರತಿ ಕ್ವಿಂಟಲ್‌ಗೆ 290 ರೂ ಹೆಚ್ಚಿಸಲಾಗಿದೆ. ಇದರಿಂದ ಕಬ್ಬಿನ ರಫ್ತನ್ನು ಮತ್ತಷ್ಟು ಹೆಚ್ಚಿಸುತ್ತದೆ, ಹೆಚ್ಚಿನ ಎಥೆನಾಲ್ ಉತ್ಪಾದನೆಗೆ ಅನುಕೂಲ ಮಾಡಿಕೊಡುತ್ತದೆ, ಉದ್ಯೋಗ ಸೃಷ್ಟಿಸುತ್ತದೆ, ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಇದು ಕೇಂದ್ರ ಸರ್ಕಾರ ರೈತ ಪರವಾಗಿದೆ ಎಂಬುದನ್ನು ತೋರಿಸುತ್ತದೆ ಎಂದರು.

- Advertisement -

ಈ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್ ಗೋಯಲ್ ಅವರನ್ನು ಅಭಿನಂದಿಸಬೇಕಾಗುತ್ತದೆ ಎಂದು ಕಡಾಡಿ ಹೇಳಿದರು.

- Advertisement -
- Advertisement -

Latest News

ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಸವರಾಜ ಪತ್ತಾರ ಅವರಿಗೆ ಸನ್ಮಾನ

ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...
- Advertisement -

More Articles Like This

- Advertisement -
close
error: Content is protected !!
Join WhatsApp Group