ತಳವಾರ – ಪರಿವಾರ ಸಮುದಾಯ ಸಹೋಹದರತ್ವದಿಂದ ಇರಬೇಕು – ಗೌತಮ ಚೌಧರಿ

Must Read

ಸಿಂದಗಿ: ಸರಕಾರದ ತುಲನಾತ್ಮಕ ಅಂಶಗಳನ್ನು ಅರಿತು ವಾಲ್ಮೀಕಿ ಸಮುದಾಯದ ಶ್ರೀಗಳು, ಮುಖಂಡರು ತೀವ್ರ ಹಿಂದುಳಿದ ತಳವಾರ-ಪರಿವಾರ ಸಮುದಾಯದ ಏಳಿಗೆಗೆ ಪೂರಕವಾದ ಸರ್ಕಾರದ ಕ್ರಮವನ್ನು ಪ್ರಶ್ನಿಸದೇ ಸಹಕಾರವನ್ನು ನೀಡಬೇಕು. ಎರಡೂ ಸಮುದಾಯ ಭ್ರಾತೃತ್ವ ಭಾವದಿಂದ ಮುನ್ನಡೆದು ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆಯಬೇಕು. ಆದ ಕಾರಣ ವಾಲ್ಮೀಕಿ ಸಮುದಾಯ ಈ ವಿಷಯದಲ್ಲಿ ವಿರೋಧ ವ್ಯಕ್ತಪಡಿಸುವುದು ತರವಲ್ಲ ಎಂದು ರಾಷ್ಟ್ರೀಯ ಮೀನುಗಾರರ ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಗೌತಮ್ ಚೌಧರಿ ಕುಟುಕಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಳವಾರ ಮತ್ತು ಪರಿವಾರ ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ವಿರೋಧ ವ್ಯಕ್ತಪಡಿಸುತ್ತಿರುವುದು ಖೇದಕರ. ಏಕೆಂದರೆ ತಳವಾರ-ಪರಿವಾರ ಸಮುದಾಯ ತುಂಬಾ ಹಿಂದುಳಿದ ಜನಾಂಗಕ್ಕೆ ಸೇರಿದ್ದು, ಇದೂ ಸಹ ಶೋಷಿತ ಸಮುದಾಯವಾಗಿದೆ.

ಈ ವರ್ಗದ ಬಹುತೇಕರು ಕಡು ಬಡತನದಲ್ಲಿ ಬದುಕು ಸವೆಸುತ್ತಿದ್ದಾರೆ. ಹೀಗಿರುವಾಗ ತಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಬಹುಕಾಲದಿಂದ ಈ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯೋಚಿತವಾಗಿಯೇ ಇದೆ, ಇದರಿಂದಾಗಿಯೇ ಮಾನ್ಯ ಮುಖ್ಯಮಂತ್ರಿಗಳು ಈ ವರ್ಗಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ತಳವಾರ-ಪರಿವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ವಿತರಿಸುವಂತೆ ಕ್ರಮ ಕೈಗೊಂಡಿದ್ದಾರೆ ಎಂದು ವಿವರಣೆ ನೀಡಿ ಸ್ಪಷ್ಟಪಡಿಸಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group