Homeಸುದ್ದಿಗಳುಪ್ರಜಾಪ್ರಭುತ್ವ ವ್ಯವಸ್ಥೆ ಹಳ್ಳ ಹಿಡಿದಿದೆ! ಮಾಜಿ ಸಚಿವ ರೇವಣ್ಣ ಹೇಳಿಕೆ

ಪ್ರಜಾಪ್ರಭುತ್ವ ವ್ಯವಸ್ಥೆ ಹಳ್ಳ ಹಿಡಿದಿದೆ! ಮಾಜಿ ಸಚಿವ ರೇವಣ್ಣ ಹೇಳಿಕೆ

ದೇಶ ಉಳಿವಿಗಾಗಿ ಕಾಂಗ್ರೆಸ್ ಗೆ ಬೆಂಬಲಿಸಿ

ಸಿಂದಗಿ: ದೇಶದಲ್ಲಿ ದಿನೇ ದಿನೇ ಭ್ರಷ್ಟಾಚಾರ, ಹೆಚ್ಚಾಗುತ್ತಿದೆ ಪ್ರಜಾಪ್ರಭುತ್ವ ವ್ಯವಸ್ಥೆ ಹಳ್ಳ ಹಿಡಿದಿದೆ ಪ್ರಜಾಪ್ರಭುತ್ವ ಉಳಿವಿಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು 2023 ರ ಸಾರ್ವತ್ರಿಕ ಚುನಾವಣೆಯ ದೀಕ್ಸೂಚಿ ಆಗಲಿದೆ ಎಂದು ಮಾಜಿ ಸಾರಿಗೆ ಸಚಿವ ಎಚ್. ಎಂ. ರೇವಣ್ಣ ಹೇಳಿದರು,

ತಾಲೂಕಿನ ಗಬಸಾವಳಗಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಪರವಾಗಿ ಮಾತಯಾಚಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿರುವುದು ಕಣ್ಣಿಗೆ ಕಂಡರೂ ಕಾಣದ ಹಾಗೆ ಕುಳಿತ ಪ್ರಧಾನಿ ಮೋದೀಜಿ ಅವರ ಬಣ್ಣದ ಮಾತುಗಳು, ಸುಳ್ಳು ಹೇಳಿಕೆಗಳು ಜನರಿಗೆ ಗೊತ್ತಾಗಿದೆ ಮುಂಬರುವ ದಿನಗಳಲ್ಲಿ ಬಿಜೆಪಿಗೆ ಉಳಿಗಾಲವಿಲ್ಲ ಪೆಟ್ರೋಲ್ ಡಿಸೈಲ್ ಸೇರಿದಂತೆ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿಸಿ ಗ್ರಾಮೀಣ ಭಾಗದ ಬಡ ಕುಟುಂಬಗಳು ಬೀದಿಗೆ ಬಂದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಈ ಕ್ಷೇತ್ರ ಅಭಿವೃದ್ಧಿ ಪಡಿಸಲು ಸಹಕಾರ ಕೊಡಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಶಾಂತನಗೌಡ ಬಿರಾದಾರ, ಯೋಗೆಪ್ಪಾಗೌಡ ಪಾಟೀಲ್, ಭೀಮನಗೌಡ ಬಿರಾದಾರ, ಶಿವಾನಂದ ಹೋನವಾಡ, ಮಾಳಿಂಗರಾಯ್ ಪೂಜಾರಿ, ಸೇರಿದಂತೆ ಸುತ್ತಲಿನ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

RELATED ARTICLES

Most Popular

error: Content is protected !!
Join WhatsApp Group