ರಂಗಾಯಣಗಳು ರಂಗಕಲೆಯನ್ನು ಬೆಳೆಸುತ್ತಿವೆ

Must Read

ಧಾರವಾಡ: ಅಂದು ಮತ್ತು ಇಂದಿನ ಕಾಲಕ್ಕೆ ನಾಟಕಗಳ ಸ್ಥಿತಿಗತಿಗಳು ಬದಲಾವಣೆಗೊಂಡಿವೆ. ಭಾರತೀಯ ರಂಗಕಲೆಯನ್ನು ಉಳಿಸಿ ಬೆಳೆಸುವಲ್ಲಿ ರಂಗಾಯಣಗಳು ಸಹಕಾರಿಯಾಗಿವೆ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರು ಹಾಗೂ ರಂಗಭೂಮಿ ಕಲಾವಿದರಾದ ಮಹಾರುದ್ರಪ್ಪ ನಂದೆಣ್ಣವರ ಅವರು ಹೇಳಿದರು.

ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ, ಮಾತನಾಡಿದರು.

ರಂಗಾಯಣಗಳು ಇತಿಹಾಸ, ಸಾಮಾಜಿಕ ಹಾಗೂ ಪ್ರಚಲಿತ ವಿಚಾರಗಳ ಕುರಿತು ನಾಟಕಗಳನ್ನು ಪ್ರದರ್ಶನ ಮಾಡುವ ಮೂಲಕ ಜನರಲ್ಲಿ ಅರಿವನ್ನು ಮೂಡಿಸುವ ಕಾರ್ಯವನ್ನು ಮಾಡುತ್ತಿವೆ ಎಂದು ಹೇಳಿದರು.

ರಂಗಸಮಾಜದ ಸದಸ್ಯರಾದ ಹಿಪ್ಪರಗಿ ಸಿದ್ಧರಾಮ ಅವರು ಮಾತನಾಡಿ, ರಂಗಾಯಣಗಳು ಅತ್ಯಂತ ಕ್ರಿಯಾಶೀಲವಾಗಿ ರಂಗಚಟುವಟಿಕೆಗಳನ್ನು ಮಾಡುವ ಮೂಲಕ ಉತ್ತಮ ನಾಟಕಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತಿವೆ. ಧಾರವಾಡ ರಂಗಾಯಣವು ಪ್ರತಿ ವಾರವೂ ನಾಟಕಗಳನ್ನು ಪ್ರದರ್ಶನ ಮಾಡುವ ಮೂಲಕ ರಂಗಾಸಕ್ತರ ಮನವನ್ನು ತಣಿಸುತ್ತಿವೆ ಎಂದು ಹೇಳಿದರು.

ರಂಗಾಯಣದ ನಿರ್ದೇಶಕರಾದ ರಮೇಶ ಪರವಿನಾಯ್ಕರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಂಗಾಯಣವು ಪ್ರತಿ ವಾರಾಂತ್ಯದಲ್ಲಿ ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿ ಕಲಾವಿದರಿಗೆ ಅವಕಾಶಗಳನ್ನು ನೀಡುತ್ತಿದೆ. ಇದರಿಂದ ಎಲ್ಲ ಕಲಾವಿದರಿಗೂ ಸಹಕಾರ ದೊರಕುತ್ತಿವೆ. ರಂಗಾಸಕ್ತರು ನಾಟಕಗಳನ್ನು ನೋಡುವುದರ ಮೂಲಕ ರಂಗಭೂಮಿಯನ್ನು ಬೆಳೆಸಬೇಕು ಎಂದು ಹೇಳಿದರು.

ಹಿರಿಯ ತಬಲಾ ಕಲಾವಿದರಾದ ಸುರೇಶ ನಿಡಗುಂದಿ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಅವರು ಉಪಸ್ಥಿತರಿದ್ದರು. ಫಕ್ಕೀರಪ್ಪ ಮಾದನಭಾವಿ ಕಾರ್ಯಕ್ರಮ ನಿರೂಪಿಸಿದರು. ಜೋಗಿ ರಚಿಸಿ, ಮಂಜು ಸಿರಿಗೇರಿ ನಿರ್ದೇಶಿಸಿದ ವಿಶ್ವಾಮಿತ್ರ ಮೇನಕೆ ಡಾನ್ಸ್ ಮಾಡೋದು ಏನಕೆ ನಾಟಕವನ್ನು ಧಾತ್ರಿ ರಂಗ ಸಂಸ್ಥೆ (ರಿ) ಸಿರಿಗೇರಿ ಕಲಾವಿದರು ಪ್ರದರ್ಶಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group