ಆರ್ ಎಸ್ ಎಸ್ ಬಗ್ಗೆ ಮಾತಾಡುವವರ ನಾಲಿಗೆ ಚಪ್ಪಲಿಗೆ ಸಮ

Must Read

ಸಿಂದಗಿ: ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ಕಾಂಗ್ರೆಸ್ ದಲಿತ ವಿರೋಧಿ ಎಂದು ಶಾಸಕ ಎನ್. ಮಹೇಶ ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಬಿಜೆಪಿ ದಲಿತ ವಿರೋಧಿ ಎಂದು ಸಮುದಾಯಕ್ಕೆ ಸುಳ್ಳು ಹೇಳುತ್ತಿದ್ದಾರೆ.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ನೀಡಿದ್ದು ಬಿಜೆಪಿ ಪಕ್ಷ. ಪ್ರಧಾನಿ ನರೇಂದ್ರ ಮೋದಿ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ 5 ಸ್ಥಳಗಳನ್ನು ಅಭಿವೃದ್ಧಿಪಡಿಸಿ ಗೌರವ ನೀಡಿದ್ದಾರೆ. ಸಿಂದಗಿಯಲ್ಲಿ ರಮೇಶ ಭೂಸನೂರ ಪರ ಅಲೆ ಇದ್ದು ದಲಿತರಷ್ಟೇ ಅಲ್ಲ ಎಲ್ಲ ಸಮುದಾಯದವರು ಬಿಜೆಪಿ ಮತ ನೀಡಬೇಕು ಎಂದರು.

ರಾಜ್ಯ ಬಿಜೆಪಿ ವಕ್ತಾರ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷದವರೇ ಆದ ಸಲೀಮ್ ಹಾಗೂ ಉಗ್ರಪ್ಪ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಕಲೆಕ್ಷನ್ ಗಿರಾಕಿ ಎಂದು ಕರೆದಿದ್ದಾರೆ. ಅಲ್ಪಸಂಖ್ಯಾತರ ಬಗ್ಗೆ ಗೌರವ ಇರುವ ಕಾಂಗ್ರೆಸ್ ಉಗ್ರಪ್ಪ ಅವರಿಗೆ ಇಟ್ಟುಕೊಂಡು ಸಲೀಮ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ. ಧೈರ್ಯ ಇದ್ದರೆ ಉಗ್ರಪ್ಪರನ್ನು ತೆಗೆದು ಹಾಕಿ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಹಾಗೂ ಡಿಕೆಶಿ ನಾಲಿಗೆ ಚಪ್ಪಲಿಗೆ ಸಮ.

ಆರ್.ಎಸ್.ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡುವ ಸಿದ್ದರಾಮಯ್ಯ, ಡಿಕೆಶಿ ಯಾರೇ ಆಗಲಿ ಅವರ ನಾಲಿಗೆ ಆರ್.ಎಸ್.ಎಸ್ ಚಪ್ಪಲಿಗೆ (ಮೆಟ್ಟಿಗೆ) ಸಮಾನ ಎಂದು ಛಲವಾದಿ ನಾರಾಯಣ ಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಹಾಗೂ ಡಿಕೆಶಿ ಕಾಂಗ್ರೆಸ್ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಿಂದಗಿ ಮತದಾರರು ಕಾಂಗ್ರೆಸ್ ನಾಯಕರ ಮಾತಿಗೆ ಮರುಳಾಗದೆ ದಲಿತರ ನಡೆ ಬಿಜೆಪಿ ಕಡೆ ಎಂದು ಎಲ್ಲರೂ ಸಿಂದಗಿ ಕ್ಷೇತ್ರದಲ್ಲಿ ರಮೇಶ ಭೂಸನೂರ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂರ್ಭದಲ್ಲಿ ಸ್ನೇಹಲತಾ ಶೆಟ್ಟಿ, ಮಾಜಿ ಶಾಸಕ ನಂಜುಂಡ ಸ್ವಾಮಿ, ಅಂಬಾರಾಯ ಅಷ್ಟಗಿ, ಅನೇಕರು ಇದ್ದರು.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group